ಚೆನ್ನೈ: ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಉನ್ನತ ಶಿಕ್ಷಣ ಸಚಿವ ಕೆ ಪಿ ಅನ್ಬಳಗನ್ ಅವರಿಗೆ ಪಾಸಿಟಿವ್ ದೃಢಪಟ್ಟಿದೆ.
ಆರಂಭದಲ್ಲಿ ಅನ್ಬಳಗನ್ ಅವರಿಗೆ ಯಾವುದೇ ಕೊರೋನಾ ಲಕ್ಷಣ ಕಾಣಿಸಿಕೊಂಡಿರಲಿಲ್ಲ. ಆದರೆ ನಂತರ ಸ್ವಲ್ಪ ಕೆಮ್ಮು ಕಾಣಿಸಿಕೊಂಡ ನಂತರ ಅವರನ್ನು ಎರಡನೇ ಬಾರಿ ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಸಚಿವರ ವರದಿ ಪಾಸಿಟಿವ್ ಬಂದಿದೆ ಎಂದು ಎಐಒಟಿ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ಸದ್ಯ ಸಚಿವರ ಆರೋಗ್ಯ ಸ್ಥಿರವಾಗಿದ್ದು, ಸಿಟಿ ಸ್ಕ್ಯಾನ್ ಸೇರಿದಂತೆ ಅವರ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲ ವರದಿಗಳು ನಾರ್ಮಲ್ ಇದೆ ಎಂದು ಆಸ್ಪತ್ರೆ ತಿಳಿಸಿದೆ.
ಅನ್ಬಳಗನ್ ಅವರು ಸಹ ಕೊವಿಡ್-19 ನಿಯಂತ್ರಣ ತಂಡದ ಭಾಗವಾಗಿದ್ದು, ಅವರು ಜೂನ್ 10 ರಂದು ರಿಪನ್ ಕಟ್ಟಡದಲ್ಲಿ ನಡೆದ ಕೊವಿಡ್-19 ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದರು.
Comments are closed.