ರಾಷ್ಟ್ರೀಯ

ಕೇರಳದಲ್ಲಿ ಒಂದು ವರ್ಷ ಕಾಲ ಫೇಸ್ ಮಾಸ್ಕ್ ಕಡ್ಡಾಯ

Pinterest LinkedIn Tumblr


ತಿರುವನಂತಪುರಂ: ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಕೇರಳದಲ್ಲಿ ಒಂದು ವರ್ಷಗಳ ಕಾಲ ಫೇಸ್ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯನ್ನು ಕಡ್ಡಾಯಗೊಳಿಸಲಾಗಿದೆ.

ಕೇರಳ ಸರ್ಕಾರದಿಂದ ಈ ವರ್ಷ ಹೊರಡಿಸಲ್ಪಟ್ಟ ಕೇರಳ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆಯಲ್ಲಿ ಇವುಗಳು ಹೆಚ್ಚುವರಿಯಾಗಿ ಸೇರ್ಪಡೆಯಾದ ನಿಯಮಗಳಾಗಿವೆ.

ಇದರ ಪ್ರಕಾರ,ಎಲ್ಲಾ ಸಾರ್ವಜನಿಕ ಸ್ಥಳಗಳು,ಪೂಜಾ ಸ್ಥಳಗಳು ಮತ್ತು ಎಲ್ಲಾ ರೀತಿಯ ವಾಹನಗಳಲ್ಲಿ ಫೇಸ್ ಮಾಸ್ಕ್ ಬಳಕೆ ಕಡ್ಡಾಯವಾಗಿದೆ. ಸಾರ್ವಜನಿಕ ಸ್ಥಳಗಳು ಮತ್ತು ಕಾರ್ಯಕ್ರಮಗಳಲ್ಲಿ ಆರು ಅಡಿಗಳ ದೂರದವರೆಗೂ ವೈಯಕ್ತಿಕ ಅಂತರ ಕಾಯ್ದುಕೊಳ್ಳುವಿಕೆಯನ್ನು ಕಡ್ಡಾಯಗೊಳಿಸಲಾಗಿದೆ.

ಮದುವೆ ಸಮಾರಂಭಗಳಲ್ಲಿ 50 ಜನರಿಗಿಂತ ಹೆಚ್ಚು ಜನ ಪಾಲ್ಗೊಳ್ಳುವಂತಿಲ್ಲ.ಸಂಘಟಕರು ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು,
ಅಂತ್ಯಸಂಸ್ಕಾರಕ್ಕೆ 20 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಪ್ರತಿಭಟನೆ ಮತ್ತಿತರ ಕಾರ್ಯಕ್ರಮಗಳಲ್ಲಿ 10 ಜನರಿಗಿಂತ ಹೆಚ್ಚಿನ ಜನ ಪಾಲ್ಗೊಳ್ಳುವಂತಿಲ್ಲ.

Comments are closed.