ರಾಷ್ಟ್ರೀಯ

ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ಗೂ ಕೊರೊನಾ ಪಾಸಿಟಿವ್ ದೃಢ

Pinterest LinkedIn Tumblr

ಪಣಜಿ: ಗೋವಾ ರಾಜ್ಯದ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಅವರು ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದು, ‘ನನಗೆ ಕೊರೊನಾ ಪಾಸಿಟಿವ್‌ ಆಗಿದೆ ಎಂದು ತಿಳಿಸಲು ಇಚ್ಛಿಸುತ್ತೇನೆ. ಯಾವುದೇ ಕೊರೊನಾ ಲಕ್ಷಣವಿಲ್ಲದ ಕಾರಣ ಹೋಮ್‌ ಐಸೋಲೇಶನ್‌ಗೆ ಒಳಗಾಗಿದ್ದೇನೆ. ಮನೆಯಲ್ಲೇ ನನ್ನ ಎಲ್ಲಾ ಕರ್ತವ್ಯಗಳನ್ನು ನಾನು ಮುಂದುವರಿಸುತ್ತೇನೆ. ನನ್ನ ನಿಕಟ ಸಂಪರ್ಕಕ್ಕೆ ಬಂದವರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಪ್ರಮೋದ್‌ ಅವರು ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

Comments are closed.