ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಜೋರಾಗಿದ್ದು, ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 89,706 ಹೊಸ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 43,70,129ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 1,115 ಜನರು ಮೃತಪಟ್ಟಿದ್ದು, ಈವರೆಗೆ ಬಲಿಯಾದವರ ಸಂಖ್ಯೆ 73,890ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು 43,70,129 ಮಂದಿ ಸೋಂಕಿತರ ಪೈಕಿ 33,98,845 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 8,97,394 ರೋಗಿಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆಯವರೆಗೆ ದೇಶದಲ್ಲಿ ಒಟ್ಟು 5 ಕೋಟಿಯ 18 ಲಕ್ಷದ 04 ಸಾವಿರದ 677 ಮಂದಿಯ ಕೊರೋನಾ ಪರೀಕ್ಷೆ ಮಾಡಲಾಗಿದ್ದು ಇವರಲ್ಲಿ 11 ಲಕ್ಷದ 54 ಸಾವಿರದ 549 ಕೊರೋನಾ ಪರೀಕ್ಷೆಯ ಮಾದರಿಗಳನ್ನು ನಿನ್ನೆ ಒಂದೇ ದಿನ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ತಿಳಿಸಿದೆ.
Comments are closed.