ರಾಷ್ಟ್ರೀಯ

ಭಾರತದ ಶೂಟರ್ ಶ್ರೇಯಸಿ ಸಿಂಗ್ ಬಿಜೆಪಿಗೆ ಸೇರ್ಪಡೆ

Pinterest LinkedIn Tumblr

ಪಾಟ್ನಾ: ಅರ್ಜುನ ಪ್ರಶಸ್ತಿ ಪುರಸ್ಕೃತೆ, ಭಾರತದ ಶೂಟರ್ ಬಿಹಾರ ಮೂಲದ ಶ್ರೇಯಸಿ ಸಿಂಗ್ ಬಿಜೆಪಿಗೆ ಸೇರ್ಪಡೆಗೊಂಡಿದ್ದು ಈ ಮೂಲಕ ಆರ್‌ಜೆಡಿಗೆ ಸೇರ್ಪಡೆಗೊಳ್ಳುವ ಊಹಾಪೋಹಗಳಿಗೆ ತೆರೆಬಿದ್ದಿದೆ.

ಅಂತಾರಾಷ್ಟ್ರೀಯ ಖ್ಯಾತಿಯ ಶೂಟರ್ ಮತ್ತು ಅರ್ಜುನ ಖೇಲ್ ಪ್ರಶಸ್ತಿ ಪುರಸ್ಕೃತ ಶ್ರೇಯಾಸಿ ಸಿಂಗ್ ಅವರು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಸಂಕಲ್ಪದೊಂದಿಗೆ ಬಿಜೆಪಿಗೆ ಸೇರಿದ್ದಾರೆ. ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಸಂಜಯ್ ಜೈಸ್ವಾಲ್ ಬಿಜೆಪಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಶ್ರೇಯಸಿ ಸಿಂಗ್ ಪಕ್ಷಕ್ಕೆ ಸೇರಿದರು.

ಮಾಜಿ ಕೇಂದ್ರ ಸಚಿವ ದಿವಂಗತ ದಿಗ್ವಿಜಯ್ ಸಿಂಗ್ ಮತ್ತು ಮಾಜಿ ಬಂಕಾ ಸಂಸದರಾದ ಪುತುಲ್ ಸಿಂಗ್ ಅವರ ಪುತ್ರಿಯಾಗಿರುವ ಇವರು ಅವರು ಅನೇಕ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕಾಗಿ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಂಸೆ ಮತ್ತು ಪದಕಗಳನ್ನು ಗೆದ್ದಿದ್ದಾರೆ.

ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಶೂಟಿಂಗ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ ಮತ್ತು 2014 ರಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

Comments are closed.