ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಯಿಂದ ಬೇಸತ್ತು ಕೇರಳದ ಜೆಡಿಎಸ್ ಘಟಕವನ್ನು ವಿಸರ್ಜಿಸಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ಡಿ ದೇವೇಗೌಡ ತಿಳಿಸಿದ್ದಾರೆ.
ಕೇರಳದ ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಪರಾಗಿರುವ ಸಿಕೆ ನಾನು, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದರು. ಈ ಕುರಿತು ಕಾರಣಕೇಳಿ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು. ಆದರೆ, ಇದಕ್ಕೆ ಅವರಿಂದ ಉತ್ತರ ಬಂದಿಲ್ಲ. ಈ ಹಿನ್ನಲೆ ಈ ಕ್ರಮಕ್ಕೆ ಮುಂದಾಗಿರುವುದಾಗಿ ಅವರು ತಿಳಿಸಿದ್ದಾರೆ. ಇದೇ ವೇಳೆ ಸಚಿವ ಮ್ಯಾಥ್ಯು ಟಿ ಥಾಮಸ್ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿರುವ ಬಿಎಂ ಫಾರೂಖ್ ಸೆ.24ರಂದು ಕಾರಣ ಕೇಳಿ ಸಿಕೆ ನಾನು ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಈ ನೋಟಿಸ್ಗೆ ಉತ್ತರಿಸದ ಅವರು ಯಾವುದೇ ನಿರ್ದೇಶನಗಳನ್ನು ಅನುಸರಿಸುವಲ್ಲಿ ವಿಫಲರಾಗಿದ್ದರು.ಸಿಕೆ ನಾನು ರಾಜ್ಯ ಘಟಕವನ್ನು ಬಲಪಡಿಸುವ ಬದಲು ಅದಕ್ಕೆ ತದ್ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ್ದು, ಪಕ್ಷ ರಚಿಸಿದ ಪ್ರಮುಖ ಸಮಿತಿಗಳನ್ನು ಸಂಪರ್ಕಿಸಿಲ್ಲ ಎಂದರು
ಇದೇ ವೇಳೆ ಜೋಸ್ ತೆಟ್ಟಾಯಿ, ಜಮೀಲ ಪ್ರಕಾಶಂ ಅವರನ್ನು ಉಪಾಧ್ಯಕ್ಷರನ್ನಾಗಿ , ಬೆನ್ನಿ ಮೂಂಜೇಲಿ, ವಿ. ಮುರುಗದಾಸ್, ಬಿಕೈ ಜೋಸೆರ್ಫ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
Comments are closed.