ನವದೆಹಲಿ: ದೆಹಲಿ ಪೊಲೀಸರು ಕೆಂಪು ಕೋಟೆ ಬಳಿ ನಡೆದ ರೈತರ ಹಿಂಸಾಚಾರದಲ್ಲಿ ಸಾಮಾಜಿಕ ಕಾರ್ಯಕರ್ತ, ನಟ ದೀಪ್ ಸಿಧು ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದು, ಸಾರ್ವಜನಿಕ ಆಸ್ತಿಗಳಿಗೆ ಹಾನಿಯುಂಟುಮಾಡುವುದನ್ನು ತಡೆಯುವ ಕಾಯ್ದೆ ಹಾಗೂ ಇನ್ನಿತರ ಕಾಯ್ದೆಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ತ್ವ ಶಾಸ್ತ್ರದ ತಾಣಗಳು ಮತ್ತು ಉಳಿದಿರುವ ಕಾಯಿದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆ, ಕೊಲೆ ಯತ್ನ ಪ್ರಕರಣ (307), ಸೆಕ್ಷನ್ 152 ರ ಅಡಿಯಲ್ಲಿ ದಂಗೆಯನ್ನು ನಿಯಂತ್ರಿಸಲು ಯತ್ನಿಸುತ್ತಿದ್ದಾಗ ಸರಕಾರಿ ನೌಕರರ ಮೇಲೆ ಹಲ್ಲೆ ನಡೆಸಿದ ಆರೋಪದ ಅಡಿಯಲ್ಲೂ ದೀಪ್ ಸಿಧು ವಿರುದ್ಧ ಪ್ರಕರಣ ದಾಖಲಾಗಿದೆ.
ಕೆಂಪು ಕೋಟೆ ಬಳಿ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಜ.27 ರಿಂದ ಜ.31 ವರೆಗೂ ಕೆಂಪುಕೋಟೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
Comments are closed.