ಹೊಸದಿಲ್ಲಿ: ಟಾಟಾ ಗ್ರೂಪ್‌ನ ಅಧ್ಯಕ್ಷ, ಉದ್ಯಮಿ ರತನ್ ಟಾಟಾ ಅವರು ತಮ್ಮ ಕೊರೊನಾ ಲಸಿಕೆಯ ಮೊದಲ ಡೋಸ್ ಶನಿವಾರ ಪಡೆದರು. ಬಳಿಕ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲಸಿಕೆಯು ನೋವುರಹಿತವಾಗಿದೆ, ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಕೊರೊನಾ ಲಸಿಕೆ ಪಡೆದುಕೊಂಡು ರೋಗನಿರೋಧಕ ಸಾಮರ್ಥ್ಯವನ್ನು ಪಡೆಯುವಂತೆ ಮನವಿ ಮಾಡಿದ್ದಾರೆ.
“ಇಂದು ನಾನು ಕೊರೊನಾ ಲಸಿಕೆ ಮೊದಲ ಡೋಸ್ ಪಡೆದಿದ್ದಕ್ಕಾಗಿ ತುಂಬಾ ಧನ್ಯವಾದಗಳು. ಲಸಿಕೆ ನಿರಾಯಾಸವಾಗಿದೆ ಮತ್ತು ನೋವುರಹಿತವಾಗಿತ್ತು. ಶೀಘ್ರದಲ್ಲೇ ಎಲ್ಲರೂ ಲಸಿಕೆ ಪಡೆಯುವ ಮೂಲಕ ಸುರಕ್ಷರಾಗಿರುತ್ತೀರಿ ಎಂದು ನಾನು ಭಾವಿಸುತ್ತೇನೆ “ಎಂದು ಅವರು ಟ್ವೀಟ್ ಮಾಡಿದ್ದಾರೆ.
ಲಸಿಕೆ ಅಭಿಯಾನ ಭಾರತದಲ್ಲಿ ಆರಂಭವಾಗುತ್ತಿದ್ದಂತೆ, ಆ ಸುದ್ದಿಯನ್ನು ಟ್ವಿಟ್ಟರ್‌ನಲ್ಲಿ ರತನ್ ಟಾಟಾ ಶೇರ್ ಮಾಡಿಕೊಂಡಿದ್ದರು. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಮಾರ್ಚ್ 12 ರವರೆಗೆ 2,82,18,457 ರಷ್ಟು ಡೋಸ್‌ಗಳನ್ನು ನೀಡಲಾಗಿದೆ. ಶುಕ್ರವಾರ 20,53,537 ಡೋಸ್‌ಗಳನ್ನು ನೀಡಲಾಗಿದೆ. ಆರೋಗ್ಯ ಕಾರ್ಯಕರ್ತರ ಬಳಿಕ ಇದೀಗ ಹಿರಿಯರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಈಗಾಗಲೇ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಸೇರಿ ಅನೇಕ ರಾಜಕೀಯ ಮುಖಂಡರು ಕೊರೊನಾ ಲಸಿಕೆ ಪಡೆದಿದ್ದಾರೆ.
Comments are closed.