ನವದೆಹಲಿ: ಗುರು ತೇಜ್ ಬಹದ್ದೂರ್ ಅವರ 400 ನೇ ಜಯಂತಿಯ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೆಹಲಿಯ ಗುರುದ್ವಾರ ಸಿಸ್ ಗಂಜ್ ಸಾಹಿಬ್ಗೆ ಭೇಟಿ ನೀಡಿದ್ದಾರೆ.
400 ನೇ ಪ್ರಕಾಶ್ ಪುರಬ್ ದಿನದಂದು ನಾನು ಶ್ರೀ ಗುರು ತೇಜ್ ಬಹದ್ದೂರ್ ಅವರಿಗೆ ತಲೆ ಬಾಗುತ್ತೇನೆ. ಅವರ ಧೈರ್ಯ ಮತ್ತು ದೀನ ದಲಿತರಿಗೆ ಸೇವೆ ಸಲ್ಲಿಸುವ ಗುಣಗಳಿಂದ ಜಾಗತಿಕವಾಗಿ ಅವರನ್ನು ಗೌರವಿಸಲಾಗುತ್ತದೆ. ದಬ್ಬಾಳಿಕೆ ಮತ್ತು ಅನ್ಯಾಯಕ್ಕೆ ತಲೆಬಾಗಲು ಅವರು ನಿರಾಕರಿಸಿದ್ದರು. ಸವೋಚ್ಚ ತ್ಯಾಗ ಅನೇಕರಿಗೆ ಶಕ್ತಿ ಮತ್ತು ಪ್ರೇರಣೆ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕವಾಗಿ ಸ್ಮರಿಸಿದ್ದಾರೆ.
ಪ್ರಧಾನಿ ಮೋದಿಯವರು ಗುರುದ್ವಾರ ಸಿಸ್ ಗಂಜ್ಗೇ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಗುರು ತೇಜ್ ಬಹದ್ದೂರ್ ಕುರಿತಾಗಿ ಟ್ವೀಟ್ನಲ್ಲಿ ಬರೆದುಕೊಂಡು ಕೆಲವು ಫೋಟೋ ಹಂಚಿಕೊಂಡಿದ್ದಾರೆ. ವಿಶೇಷವೆಂದರೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ವಿಶೇಷ ಭದ್ರತೆ ಇಲ್ಲದೆ ಗುರುದ್ವಾರ ಸಿಸ್ ಗಂಜ್ ಸಾಹಿಬ್ಗೆ ಭೇಟಿ ನೀಡಿದ್ದರು. ಜನರ ನಡುವೆಯೆ ಬಂದು ಪೂಜೆ ಸಲ್ಲಿಸಿದ್ದಾರೆ.
Comments are closed.