ನವದೆಹಲಿ: ಕೋವಿಡ್ ಲಸಿಕೆ ಪಡೆಯಲು ಯಾರೂ ಹಿಂಜರಿಯಬಾರದು. ದಯವಿಟ್ಟು ಪ್ರತೀಯೊಬ್ಬರೂ ಲಸಿಕೆ ಪಡೆದುಕೊಳ್ಳಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಮನವಿ ಮಾಡಿಕೊಂಡಿದ್ದಾರೆ.
ತಿಂಗಳ ರೇಡಿಯೊ ಕಾರ್ಯಕ್ರಮ ‘ಮನ್ ಕೀ ಬಾತ್’ನಲ್ಲಿ ಮಾತನಾಡಿರುವ ಅವರು, ದೇಶದ ಲಸಿಕಾ ಅಭಿಯಾನವನ್ನು ಕೊಂಡಾಡಿದ್ದಾರೆ.
ನಾವು ದೇಶವಾಸಿಗಳು ಕೊರೋನಾ ವಿರುದ್ಧ ಹೋರಾಡುತ್ತಿದ್ದೇವೆ. ಈ ಹೋರಾಟದಲ್ಲಿ ನಾವು ಒಟ್ಟಾಗಿ ಅನೇಕ ಅಸಾಧಾರಣ ಮೈಲಿಗಲ್ಲನ್ನು ಸಾಧಿಸಿದ್ದೇವೆ. ಕೆಲವೇ ದಿನಗಳ ಹಿಂದೆ ನಮ್ಮ ದೇಶವು ಅಭೂತಪೂರ್ವ ಸಾಧನೆ ಮಾಡಿದೆ ಎಂದು ಹೇಳಿದ್ದಾರೆ.
ಲಸಿಕೆ ವಿಚಾರದಲ್ಲಿ ದಯವಿಟ್ಟು ಭಯವನ್ನು ತೊಡೆದುಹಾಕಿ. ಲಸಿಕೆ ಹಾಕಿಸಿದ ಬಳಿಕ ಕೆಲವೊಮ್ಮೆ ಜನರಿಗೆ ಜ್ವರ ಬರಬಹುದು. ಆದರೆ, ಅದು ತುಂಬಾ ಸೌಮ್ಯವಾಗಿರುತ್ತದೆ.ಕೆಲವೇ ಗಂಟೆಗಳವರೆಗೆ ಇರುತ್ತದೆ. ಲಸಿಕೆಯನ್ನು ತಪ್ಪಿಸುವುದು ತುಂಬಾ ಅಪಾಯಕಾರಿ. ನೀವು ನಿಮ್ಮನ್ನು ಅಪಾಯಕ್ಕೆ ತಳ್ಳುವುದು ಮಾತ್ರವಲ್ಲದೆ. ನಿಮ್ಮ ಕುಟುಂಬ ಮತ್ತು ಇಡೀ ಹಳ್ಳಿಯನ್ನೂ ಕೂಡ ಅಪಾಯಕ್ಕೆ ದೂಡಿದಂತಾಗುತ್ತದೆ ಎಂದು ಎಚ್ಚರಿಸಿದ್ದಾರೆ.
Comments are closed.