ಚಂಡೀಗಢ: ಪಂಜಾಬ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ದಿಢೀರ್ ರಾಜಿನಾಮೆ ನೀಡಿದ್ದು ಇದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ನವಜೋತ್ ಸಿಧು ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ, ರಾಜಿಯಿಂದಲೇ ಮನುಷ್ಯನ ಪಾತ್ರದ ಕುಸಿತವಾಗುತ್ತದೆ. ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ ಪಕ್ಷದ ಸೇವೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.
ಕಳೆದ ಜುಲೈನಲ್ಲಿ ಸಿಧು ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದರು.
Comments are closed.