ಟೋಕಿಯೋ, ಅ.1: ಜಪಾನ್‍ನಲ್ಲಿ ಸಂಭವಿಸಿದ ಜ್ವಾಲಾಮುಖಿ ಸ್ಫೋಟದಲ್ಲಿ ಸುಮಾರು 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಈ ಮೊದಲು 43 ಮೃತದೇಹಗಳು ಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಪಡೆಗಳು ಮತ್ತೆ 7 ಮೃತದೇಹಗಳನ್ನು ಹೊರತೆಗೆದಿವೆ.
ಇಲ್ಲಿನ ಓನ್‍ಟೇಕ್ ಪರ್ವತಾಗ್ರದಲ್ಲಿ ಸಂಭವಿಸಿದ ಜ್ವಾಲಾಮುಖಿಯ ನಂತರ 36 ಮೃತದೇಹಗಳು ತಕ್ಷಣ ಸಿಕ್ಕಿದ್ದವು. ಈ 7 ಜನರೂ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ರಾಜಧಾನಿ ಟೋಕಿಯೋ ಸಮೀಪದ ಓಟಕಿ ಗ್ರಾಮದ ಬಳಿ ಇರುವ ಬೆಟ್ಟದಲ್ಲಿ ಈ ಜ್ವಾಲಾಮುಖಿ ಸಂಭವಿಸಿದೆ. ಜ್ವಾಲಾಮುಖಿಯಿಂದ ಉಂಟಾಗಿರುವ ಅವಶೇಷಗಳಡಿ ಇನ್ನೂ 20ಕ್ಕೂ ಹೆಚ್ಚು ಜನ ಸಿಲುಕಿಕೊಂಡಿರುವ ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಸುಮಾರು ಒಂದು ಸಾವಿರ ಸೇನಾಪಡೆ, .ಪೆÇಲೀಸರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬೆಟ್ಟದ ಮೇಲಿರುವವರ ರಕ್ಷಣೆಗಾಗಿ ಹೆಲಿಕಾಪ್ಟರ್‍ಗಳನ್ನು ಬಳಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೂ ಹಲವಾರು ಮಂದಿ ನಾಪತ್ತೆಯಾಗಿದ್ದು ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. 71 ಜನ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ. ನಾಪತ್ತೆಯಾಗಿರುವವರ ಶೋಧಕ್ಕಾಗಿ ರಕ್ಷಣಾ ಸಿಬ್ಬಂದಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ.