ಅಂತರಾಷ್ಟ್ರೀಯ

ಅಶ್ಲೀಲ ಚಿತ್ರಗಳನ್ನು ಅಪ್‌ಲೋಡ್ ಮಾಡಿದ್ದಕ್ಕೆ 18 ವರ್ಷ ಜೈಲು

Pinterest LinkedIn Tumblr

yut

ಕ್ಯಾಲಿಫೋರ್ನಿಯಾ, ಏ.4: ಸಾವಿರಾರು ಅಶ್ಲೀಲ ಚಿತ್ರಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿ ತನ್ನ ಸ್ನೇಹಿತರಿಗೆ ಕಳುಹಿಸುತ್ತಿದ್ದ ವ್ಯಕ್ತಿಯೊಬ್ಬನಿಗೆ ಇಲ್ಲಿನ ನ್ಯಾಯಾಲಯ 18 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಅಮೆರಿಕದ ಇತಿಹಾಸದಲ್ಲೇ ಇಂತಹ ಕೃತ್ಯವನ್ನು ಅಪರಾಧ ಪ್ರಕರಣವೆಂದು ಪರಿಗಣಿಸಿ ಶಿಕ್ಷೆ ವಿಧಿಸಲಾಗಿದೆ. ರಿವೆಂಜ್ ಪ್ರೋನ್ ಎಂಬ ವೆಬ್‌ಸೈಟ್‌ನ್ನು ಆರಂಭಿಸಿ 10 ಸಾವಿರಕ್ಕೂ ಹೆಚ್ಚು ಅಶ್ಲೀಲ ಚಿತ್ರಗಳನ್ನು ಅಪ್‌ಲೋಡ್ ಮಾಡಿದ್ದ. ಜನರಿಗೆ ಕಿರಿಕಿರಿ ಉಂಟು ಮಾಡಿದ್ದ ಹಿನ್ನೆಲೆಯಲ್ಲಿ ಸ್ಯಾಂಟ್ ಡಿಗೋ(28) ಎಂಬಾತನನ್ನು ಬಂಧಿಸಿದ್ದ ಪೊಲೀಸರು ಅಪರಾಧ ನಿಯಮದಡಿ ಪ್ರಕರಣ ದಾಖಲಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

ಕ್ಯಾಲಿಫೋರ್ನಿಯಾದ ಅಟರ್ನಿ ಜನರಲ್ ಕಮಲಾ ಹ್ಯಾರಿಸ್ ಪ್ರಕರಣದ ಕುರಿತಂತೆ ಸಮಾಜದ ಮೇಲಾಗುವ ದುಷ್ಪರಿಣಾಮದ ಬಗ್ಗೆ ನ್ಯಾಯಾಲಯದ ಗಮನ ಸೆಳೆದಿದ್ದರು. ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶರು ಆತನಿಗೆ ಗಡುವು ನೀಡಿ ವೆಬ್‌ಸೈಟ್ ಮುಚ್ಚುವಂತೆ ಆದೇಶಿಸಿದ್ದರು. ಆದರೆ ಅದನ್ನು ಪಾಲಿಸದೆ ಮತ್ತೆ ಕುಚೋದ್ಯ ನಡೆಸಿದ ಪರಿಣಾಮ ಹದಿನೆಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಅಮೆರಿಕದ ನ್ಯಾಯಾಂಗ ವ್ಯವಸ್ಥೆಯಲ್ಲಿ ಇದೇ ಪ್ರಥಮ ಬಾರಿಗೆ ಇಂತಹ ಪ್ರಕರಣವನ್ನು ಅಪರಾಧವೆಂದು ಪರಿಗಣಿಸಿ ಶಿಕ್ಷೆ ವಿಧಿಸಲಾಗಿದೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

Write A Comment