ಅಂತರಾಷ್ಟ್ರೀಯ

ಲಲಿತ್ ಮೋದಿಗೆ ಜಾಮೀನು ರಹಿತ ವಾರಂಟ್ ಜಾರಿ

Pinterest LinkedIn Tumblr

lalithಸದ್ಯ ಲಂಡನ್ ನಲ್ಲಿ ವಾಸ್ತವ್ಯ ಹೂಡಿರುವ ತೆರಿಗೆ ವಂಚನೆ ಮತ್ತು ಕಳಂಕಿತ ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ವಿರುದ್ಧ ಮುಂಬೈ ಕೋರ್ಟ್ ಬುಧವಾರ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ್ದು ಸದ್ಯದಲ್ಲಿಯೇ ಭಾರತ ಲಲಿತ್ ಮೋದಿಯನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡುವ ಸಾಧ್ಯತೆ ಇದೆ.

ಈ ಹಿಂದೆ ಜಾರಿ ನಿರ್ದೇಶನಾಲಯ ಹಲವು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಕೂಡಾ ಮೋದಿ ಉತ್ತರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಕೋರ್ಟ್ ಮೆಟ್ಟಿಲೇರಿ, ಜಾಮೀನು ರಹಿತ ವಾರಂಟ್ ಜಾರಿಗೆ ಮನವಿ ಮಾಡಿತ್ತು.ಪ್ರಕರಣದ ವಿಚಾರಣೆ ನಡೆಸಿದ ಮುಂಬೈ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ.

ತೆರಿಗೆ ವಂಚನೆ ಪ್ರಕರಣದಲ್ಲಿ ಸಿಲುಕಿದ್ದ ಲಲಿತ್ ಮೋದಿಗೆ ಬಿಜೆಪಿ ಮುಖಂಡರ ಜತೆ ಸಂಪರ್ಕವಿದ್ದು ಅದರಲ್ಲಿಯೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಹಾಗೂ ರಾಜಸ್ಥಾನ್ ಸಿಎಂ ವಸುಂಧರಾ ರಾಜೇ ಲಲಿತ್ ಗೆ ನೆರವು ನೀಡಿದ್ದಾರೆಂಬ ಆರೋಪ ಕೇಳಿ ಬಂದಿತ್ತು. ಅಲ್ಲದೇ ಇದೇ ವಿಷಯವಾಗಿ ಲೋಕಸಭೆಯಲ್ಲಿ ವಿಪಕ್ಷಗಳು ಗದ್ದಲ ಮುಂದುವರಿಸಿದ್ದು ಈ ನಡುವೆ ನ್ಯಾಯಾಲಯ ವಾರಂಟ್ ಜಾರಿ ಮಾಡಿರುವುದು ಸಾಕಷ್ಟು ಮಹತ್ವ ಪಡೆದಿದೆ.

Write A Comment