ಇತ್ತೀಚೆಗೆ ವಿಮಾನ ಅವಘಡಗಳು ಹೆಚ್ಚುತ್ತಿದ್ದು ಇದಕ್ಕೆ ನಿದರ್ಶನವೆಂಬಂತೆ ಆಫ್ಘಾನಿಸ್ತಾನದ ಝಾಬುಲ್ ಪ್ರಾಂತ್ಯದ ದಕ್ಷಿಣ ಭಾಗದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡು 17 ಮಂದಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ಝಾಬುಲ್ ಪ್ರಾಂತ್ಯದ ಶಿಂಕೈ ಜಿಲ್ಲೆಯಲ್ಲಿ ಈ ಅವಘಡ ಸಂಭವಿಸಿದ್ದು ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಧರೆಗುರುಳಿತು ಎನ್ನಲಾಗಿದೆ. ಘಟನೆಯಲ್ಲಿ 12 ಮಂದಿ ಆಫ್ಘನ್ ಯೋಧರು ಸೇರಿದಂತೆ 17 ಜನ ಸಾವನ್ನಪ್ಪಿದ್ದಾರೆ.
ಈಗಾಗಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದ್ದು ಘಟನೆಯ ಕುರಿತಂತೆ ತನಿಖೆಗೆ ಆದೇಶಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.