ನ್ಯೂಯಾರ್ಕ್ನ ಶಾಲೆಯೊಂದರಲ್ಲಿ ಸ್ಫೋಟ ಸಂಭವಿಸಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ.
ಇಲ್ಲಿನ ಜಾನ್ ಎಫ್ ಕೆನಡಿ ಹೈಸ್ಕೂಲ್ನ ಕೊಠಡಿಯೊಂದರಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಈ ಸ್ಫೋಟ ಸಂಭವಿಸಿದ್ದು ಸ್ಪೋಟದ ತೀವೃತೆಗೆ ತಕ್ಷಣ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು ಕೊಠಡಿಯ ಕಿಟಕಿ, ಬಾಗಿಲುಗಳು ಸುಟ್ಟು ಕರಕಲಾಗಿವೆ.
ಈ ಘಟನೆಯಿಂದ ಮೂವರು ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿ ನಂದಿಸಲು ಸಫಲರಾಗಿದ್ದು ಯಾವ ಕಾರಣಕ್ಕೆ ಸ್ಪೋಟ ಸಂಭವಿಸಿದೆ ಎಂಬ ಕುರಿತಾಗಿ ತನಿಖೆ ನಡೆಸುತ್ತಿದ್ದಾರೆ.