ಇಸ್ಲಾಮಾಬಾದ್: ಹಿಜ್ಬುಲ್ ಸಂಘಟನೆಯ ವ್ಯಾಪಕ ವಿರೋಧ ಲೆಕ್ಕಿಸದೇ, 2016ರ ಸಾರ್ಕ್ ಶೃಂಗ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಸಲುವಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಸಂಜೆ ಪಾಕಿಸ್ತಾನದ ಇಸ್ಲಾಮಾಬಾದ್ಗೆ ಆಗಮಿಸಿದರು. ಎರಡು ದಿನಗಳ ಸಭೆಯ ಕಾಲದಲ್ಲಿ ಸಿಂಗ್ ಅವರು ಭಾರತದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಭಯೋತ್ಪಾದಕ ಗುಂಪುಗಳಿಗೆ ಪಾಕಿಸ್ತಾನ ಬೆಂಬಲ ನೀಡುವ ವಿಷಯವನ್ನು ಪ್ರಸ್ತಾಪಿಸುವ ನಿರೀಕ್ಷೆ ಇದೆ.
ಭಾರತಕ್ಕೆ ಬಹುಕಾಲದಿಂದ ಬೇಕಾಗಿರುವ ಭಯೋತ್ಪಾದಕ ದಾವೂದ್ ಇಬ್ರಾಹಿಂ ಮತ್ತು ಗಡಿಯಾಚೆಯಿಂದ ನಡೆಯುತ್ತಿರುವ ಭಯೋತ್ಪಾದನೆಗೆ ಸಂಬಂಧಿಸಿದ ವಿಚಾರಗಳನ್ನು ರಾಜನಾಥ್ ಸಿಂಗ್ ಅವರು ಸಾರ್ಕ್ ಒಳಾಡಳಿತ/ ಗೃಹ ಸಚಿವರ ಸಮ್ಮೇಳನದಲ್ಲಿ ಗುರುವಾರ ಪ್ರಸ್ತಾಪಿಸುವ ನಿರೀಕ್ಷೆ ಇದೆ. ದಕ್ಷಿಣ ಏಷ್ಯಾ ರಾಷ್ಟ್ರಗಳ ಮಧ್ಯೆ ಅರ್ಥವತ್ತಾದ ಸಹಕಾರ ಸಾಧಿಸುವ ಬಗ್ಗೆ ಸಿಂಗ್ ಅವರು ಒತ್ತು ನೀಡಲಿದ್ದಾರೆ.
ಇಸ್ಲಾಮಾಬಾದ್ನಿಂದ ವಾಪಸ್ ಹೊರಡುವ ಮುನ್ನ ಅವರು ಸಾರ್ಕ್ ಗೃಹ ಸಚಿವರ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನದಲ್ಲಿ ಅವರು ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧಗಳ ಬಗ್ಗೆ ಮಾತನಾಡಲಿದ್ದಾರೆ.
Comments are closed.