ಇಸ್ತಾಂಬುಲ್: ಟರ್ಕಿ ರಾಷ್ಟ್ರದ ಸೆಂಟ್ರಲ್ ಇಸ್ತಾಂಬುಲ್ ನಲ್ಲಿ ಅವಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ಪರಿಣಾಮ 29 ಮಂದಿ ಸಾವನ್ನಪ್ಪಿ 166ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಟರ್ಕಿಯ ಮೆಕ್ಕಾ ಪಾಕ್ ಬಳಿ ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಮುಸುಕಾಧಾರಿಯಾಗಿ ಬಂದ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಆತ್ಮಾಹುತಿ ಬಾಂಬ್ ಸ್ಫೋಟಿಸಿದ್ದ, ಪರಿಣಾಮ ಸ್ಥಳದಲ್ಲಿದ್ದ 9 ಮಂದಿ ಪೊಲೀಸರು ಸೇರಿದಂತೆ 29 ಮಂದಿ ಸಾವನ್ನಪ್ಪಿದ್ದರು ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.
ಘಟನೆ ಸಂಬಂಧ ಈಗಾಗಲೇ 10 ಮಂದಿಯನ್ನು ಬಂಧನಕ್ಕೊಳಪಡಲಾಗಿದೆ ಎಂದು ಅಲ್ಲಿನ ಸರ್ಕಾರ ಹೇಳಿಕೊಂಡಿದ್ದು, ಬಾಂಬ್ ಸ್ಫೋಟದ ಹೊಣೆಯನ್ನು ಈ ವರೆಗೂ ಯಾವುದೇ ಉಗ್ರ ಸಂಘಟನೆಗಳು ಹೊತ್ತುಕೊಂಡಿಲ್ಲ. ಆದರೆ, ಇಸಿಸ್ ಉಗ್ರ ಸಂಘಟನೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
Comments are closed.