ಮಾಸ್ಕೋ: ಕೊರೊನಾ ವೈರಸ್ ಮಾರಣಾಂತಿಕ ರೋಗ ಹೋರಾಟಕ್ಕೆ ಜಾಗತಿಕ ಸ್ಪಂದನೆಗೆ ಬೆಂಬಲಿಸುವಂತೆ ಮತ್ತು ವಾಣಿಜ್ಯ ನಿರ್ಬಂಧಗಳನ್ನು ತೆರವುಗೊಳಿಸುವಂತೆ ವಿಶ್ವದ 20 ಅತಿ ದೊಡ್ಡ ಆರ್ಥಿಕ ರಾಷ್ಟ್ರಗಳನ್ನೊಳಗೊಂಡ ಜಿ-20 ಒಕ್ಕೂಟಕ್ಕೆ ವಿಶ್ವ ಆರೋಗ್ಯ ಸಂಸ್ಥೆ( ಡಬ್ಲ್ಯುಎಚ್‌ಒ) ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಒತ್ತಾಯಿಸಿದ್ದಾರೆ.
ಕೊರೊನಾ ವೈರಸ್ ವಿರುದ್ಧ ಜಾಗತಿಕ ಹೋರಾಟ ನಡೆಸುವ ಕುರಿತು ಚರ್ಚಿಸಲು ವಿವಿಧ ದೇಶಗಳ ಆರೋಗ್ಯ ಸಚಿವರೊಂದಿಗೆ ಭಾನುವಾರ ವಿಡಿಯೋ ಸಂವಾದ ನಡೆಸಿದ ಅವರು, ಆರೋಗ್ಯ ವ್ಯವಸ್ಥೆಯಲ್ಲಿ ದೌರ್ಬಲ್ಯಗಳನ್ನು ಸಾಂಕ್ರಾಮಿಕ ರೋಗ ಕೋವಿಡ್-19 ಎತ್ತಿ ತೋರಿಸುತ್ತಿದೆ. ಈ ನಿಟ್ಟಿನಲ್ಲಿ ಜ್ಞಾನ ವಿನಿಮಯ ಹೆಚ್ಚಿಸುವುದು ಮತ್ತು ಸಾಮರ್ಥ್ಯಗಳನ್ನು ಹೆಚ್ಚಿಸಿಕೊಳ್ಳುವತ್ತ ಆಯಾ ರಾಷ್ಟ್ರಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಜಿ-20 ರಾಷ್ಟ್ರಗಳು ಕೊವಿಡ್-19 ಸೋಂಕು ವಿರುದ್ಧ ಬದ್ಧತೆ ಹಾಗೂ ವೈಜ್ಞಾನಿಕ ಆಧಾರದ ಮೇಲೆ ಹೋರಾಡಬೇಕು. ಜಾಗತಿಕ ಸ್ಪಂದನೆಗೆ ಪ್ರೋತ್ಸಾಹ ಮುಂದುವರಿಸಬೇಕು ಎಂದು ಹೇಳಿದರು. ಉತ್ಪಾದನೆ ಹೆಚ್ಚಿಸಲು ಹಾಗೂ ಅಗತ್ಯ ವಸ್ತುಗಳನ್ನು ಸಮನಾಗಿ ವಿತರಿಸಲು ಒಟ್ಟಾಗಿ ಕೆಲಸ ಮಾಡಬೇಕು. ವಾಣಿಜ್ಯ ನಿರ್ಬಂಧಗಳನ್ನು ತೆರವುಗೊಳಿಸಬೇಕು ಎಂದು ಘೆಬ್ರೆಯೆಸಸ್ ಟ್ವೀಟ್ ಮಾಡಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ವರದಿಯಂತೆ ವಿಶ್ವದಾದ್ಯಂತ 24,17936 ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, 16,16,547 ಲಕ್ಷ ಪ್ರಕರಣಗಳು ಸಕ್ರಿಯವಾಗಿವೆ. ಇದರಲ್ಲಿ 6,35,232 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ ಹಾಗೂ 1,66,066 ಮಂದು ಮಾರಣಾಂತಿಕ ವೈರಸ್‌ಗೆ ಮೃತಪಟ್ಟಿದ್ದಾರೆ.
Comments are closed.