ನ್ಯೂಯಾರ್ಕ್ (ಮೇ 12); ವಿಶ್ವದ ದೊಡ್ಡಣ್ಣ ಅಮೆರಿಕವನ್ನು ಕೊರೋನಾ ವೈರಸ್ ಬಿಟ್ಟೂ ಬಿಡದೆ ಕಾಡುತ್ತಿದ್ದು, ಒಟ್ಟಾರೆ ಸಾವಿನ ಸಂಖ್ಯೆ 80,352ಕ್ಕೆ ಏರಿಕೆಯಾಗಿದೆ. ಇನ್ನೂ ಸೋಂಕು ಪೀಡಿತರ ಸಂಖ್ಯೆ 13,46,723ಕ್ಕೆ ಏರಿಕೆಯಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕಳೆದ ಮೂರು ತಿಂಗಳಿನಿಂದ ಅಮೇರಿಕದಲ್ಲಿ ಕೊರೋನಾ ಅಕ್ಷರಶಃ ಮರಣ ಮೃದಂಗ ಬಾರಿಸುತ್ತಿದ್ದು, ದಿನನಿತ್ಯ ಸಾವಿರಾರು ಜನ ಈ ಮಾರಕ ಕೊರೋನಾಗೆ ಬಲಿಯಾಗುತ್ತಿದ್ದಾರೆ. ಅಮೆರಿಕ ಸರ್ಕಾರ ಏನೇ ಪ್ರಯತ್ನ ನಡೆಸಿದರೂ ಈ ಮಹಾಮಾರಿಯನ್ನು ಸೋಲಿಸುವುದು ಸಾಧ್ಯವಾಗುತ್ತಿಲ್ಲ.
ಪರಿಣಾಮ ಕಳೆದ 24 ಗಂಟೆಗಳಲ್ಲಿ ಸುಮಾರು 830 ಜನ ಮೃತಪಟ್ಟಿದ್ದಾರೆ. ಭಾನುವಾರ ಸಹ ಅಮೆರಿಕದಲ್ಲಿ 776 ಜನ ಕೊರೋನಾಗೆ ಬಲಿಯಾಗಿದ್ದರು. ಇನ್ನೂ ಸೋಂಕಿತರ ಸಂಖ್ಯೆ 13 ಲಕ್ಷದ ಗಡಿ ದಾಟಿರುವ ಪರಿಣಾಮ ಸಾವಿನ ಸಂಖ್ಯೆಯೂ ಲಕ್ಷದ ಗಡಿ ದಾಟಲಿದೆ ಎಂದು ಹೇಳಲಾಗುತ್ತಿದೆ.
Comments are closed.