ಅಂತರಾಷ್ಟ್ರೀಯ

ಇಟಲಿಯಲ್ಲಿ ಕೊರೊನಾ ವೈರಸ್‌ ಗೆ 31,368 ಜನ ಸಾವು!

Pinterest LinkedIn Tumblr


ರೋಮ್: ಇಟಲಿಯಲ್ಲಿ ಕೊರೊನಾ ವೈರಸ್‌ ಸಾವುಗಳು ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ 262 ಜನರು ಕೊರೊನಾ ವೈರಾಣು ಸೋಂಕಿನಿಂದ ಸಾವಿಗೀಡಾಗಿದ್ದು, ಒಟ್ಟು ಮೃತರ ಸಂಖ್ಯೆ 31,368 ಕ್ಕೆ ಏರಿಕೆಯಾಗಿದೆ.

ಗುರುವಾರದ ವೇಳೆಗೆ ಸೋಂಕಿತರ ಸಂಖ್ಯೆ 2,23,096ಕ್ಕೆ ಏರಿಕೆಯಾಗಿದೆ. ಬುಧವಾರಕ್ಕಿಂತ ಗುರುವಾರ 2,747 ಹೆಚ್ಚು ಜನರು ಚೇತರಿಸಿಕೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,15,288 ಕ್ಕೆ ಏರಿಕೆಯಾಗಿದೆ. ಸದ್ಯ 76,440 ಜನರು ಮಾತ್ರ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ನಾಗರಿಕ ರಕ್ಷಣಾ ಇಲಾಖೆ ತಿಳಿಸಿದೆ.

ಕೊರೊನಾ ಸೋಂಕು ದೃಢಪಟ್ಟಿರುವವರ ಪೈಕಿ 855 ಜನರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 11,453 ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮತ್ತು ಸೋಂಕಿನ ಅಲ್ಪ ಲಕ್ಷಣಗಳುಳ್ಳವರು ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ ಎಂದು ತಿಳಿಸಿದೆ.

Comments are closed.