ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 68,428 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಇನ್ನು ಒಂದೇ ದಿನ ಮಹಾಮಾರಿ ವೈರಸ್ 974 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 1,38,201ಕ್ಕೆ ತಲುಪಿದೆ.
ನಿನ್ನೆ ಒಂದೇ ದಿನ 68,428 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ಅಮೆರಿಕಾದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 35,60,364ಕ್ಕೆ ಏರಿಕೆಯಾಗಿದೆ.
Comments are closed.