ಕರಾವಳಿ

ಅಕ್ಟೋಬರ್‌ನಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ: ಸಚಿವ ರೈ

Pinterest LinkedIn Tumblr

RAMANATA-RAI-NEW__

ಮಂಗಳೂರು, ಸೆ.16: ಆಡಳಿತವನ್ನು ಇನ್ನಷ್ಟು ಚುರುಕುಗೊಳಿಸುವುದಕ್ಕಾಗಿ ಜಿಲ್ಲೆಯಲ್ಲಿ ಮಂಗಳೂರು ಹೊರತುಪಡಿಸಿ ಉಳಿದ ನಾಲ್ಕು ತಾಲೂಕುಗಳ ಕೇಂದ್ರಗಳಲ್ಲಿ ಅಕ್ಟೋಬರ್ ತಿಂಗಳ ನಾಲ್ಕು ಬುಧವಾರಗಳಂದು ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.

ಜನತಾ ದರ್ಶನದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದು, ಸಂಬಂಧಪಟ್ಟ ತಾಲೂಕಿನ ಸಾರ್ವಜನಿಕರು ತಮ್ಮ ಜಿಲ್ಲಾ ಮಟ್ಟದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದವರು ಹೇಳಿದರು.

ವನ್ಯಜೀವಿ ಸಂರಕ್ಷಣೆಯಲ್ಲಿ ಕರ್ನಾಟಕ ಪ್ರಥಮ
ವನ್ಯ ಜೀವಿಗಳ ಸಂರಕ್ಷಣೆಯಲ್ಲಿ ದೇಶದಲ್ಲೇ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ ಎಂದ ಸಚಿವ ರೈ, ರಾಜ್ಯದಲ್ಲಿ ಆನೆಗಳು ಹಾಗೂ ಹುಲಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದರು. ಆನೆಗಳು ನಾಡಿಗೆ ಬಂದು ತೊಂದರೆ ನೀಡುವುದನ್ನು ತಪ್ಪಿಸುವುದಕ್ಕಾಗಿ ಹಾಸನ, ಮಡಿಕೇರಿ, ಬೆಂಗಳೂರು, ಕೋಲಾರ, ತುಮಕೂರು ಮುಂತಾದೆಡೆ ಆನೆಗಳು ನಾಡಿಗೆ ಆಗಮಿಸುವ ಕಡೆಗಳಲ್ಲಿ ರೈಲ್ವೆ ಪಟ್ಟಿಗಳನ್ನು ನಿರ್ಮಿಸಲು 212 ಕೋಟಿ ರೂ. ಮಂಜೂರಾಗಿದೆ ಎಂದರು.’

Write A Comment