ಪುತ್ತೂರು, ಸೆ.28: ಎಂಜಿನಿಯರಿಂಗ್ ಕಾಲೇಜ್‌ನ ವಿದ್ಯಾರ್ಥಿನಿಯೋರ್ವಳು ಮೊಬೈಲ್‌ನಲ್ಲಿ ಫೋಟೊ ತೆಗೆಯಲು ಹೋಗಿ ರೈಲಿನಡಿಗೆ ಬಿದ್ದು ಪ್ರಾಣ ಕಳೆದುಕೊಂಡ ಘಟನೆ ಪುತ್ತೂರು ತಾಲೂಕಿನ ಕಬಕ ಗ್ರಾಮದ ನೆಹರೂ ನಗರ ಎಂಬಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ. ರೈಲು ಹಳಿಯಲ್ಲಿ ನಿಂತು ಮೊಬೈಲ್ ನಲ್ಲಿ ಫೋಟೊ ಕ್ಲಿಕ್ಕಿಸುವ ವೇಳೆ ಆಯತಪ್ಪಿ ಚಲಿಸುತ್ತಿರುವ ರೈಲಿನಡಿಗೆ ಬಿಬಿದ್ದ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಮೃತಪಟ್ಟಪಟ್ಟಿದ್ದಾಳೆ.
ಮೃತಪಟ್ಟ ವಿದ್ಯಾರ್ಥಿನಿಯನ್ನು ಮಂಗಳೂರಿನ ಕೊಂಚಾಡಿ ನಿವಾಸಿ ದಯಾನಂದ ಆಳ್ವ ಎಂಬವರ ಪುತ್ರಿ ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ವರ್ಷಾ ರೈ (19) ಎಂದು ಗುರುತಿಸಲಾಗಿದೆ.
ಕಾಲೇಜಿನ ವಿದ್ಯಾರ್ಥಿನಿ ನಿಲಯದಲ್ಲಿ ವಾಸವಾಗಿರುವ ವರ್ಷಾ ರವಿವಾರ ಮಧ್ಯಾಹ್ನ ತನ್ನ ಸಹಪಾಠಿಗಳ ಜೊತೆ ನೆಹರೂನಗರದ ರೈಲು ಹಳಿಯ ಬಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ರೈಲು ಬರುವ ಶಬ್ದ ಕೇಳಿದ ವರ್ಷಾ ಹಾಗೂ ಅವರ ಗೆಳತಿಯರು ರೈಲು ಹಳಿಯ ಬಳಿ ನಿಂತು ರೈಲು ಚಲಿಸುತ್ತಿರುವ ಫೊಟೊ ತೆಗೆಯುತ್ತಿದ್ದರು ಎನ್ನಲಾಗಿದ್ದು ಈ ವೇಳೆ ಅಕಸ್ಮಾತ್ ವರ್ಷಾ ರೈಲಿನಡಿಗೆ ಬಿದ್ದು ಮೃತಪಟ್ಟಿದ್ದಾರೆ. ವರ್ಷಾ ಬಿದ್ದಿರುವುದನ್ನು ಕಂಡು ಆಕೆ ಯನ್ನು ಎತ್ತಲು ಮುಂದಾದ ಆಕೆಯ ಸ್ನೇಹಿತೆ ರಚನಾ ಎಂಬವರ ಕೈಗೆ ಗಂಭೀರ ಗಾಯವಾಗಿದ್ದು ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ಆಕೆಯ ಜೊತೆಗಿದ್ದ ಸಹಪಾಠಿ ವಿದ್ಯಾರ್ಥಿನಿ ಪುತ್ತೂರು ತಾಲೂಕಿನ ಈಶ್ವರಮಂಗಲ ನಿವಾಸಿ ರಚನಾ (20).
ಮೃತದೇಹವನ್ನು ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ರೈಲ್ವೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.