ಮಂಗಳೂರು :ಯುವಕನೊಬ್ಬನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ನಗರದ ರೈಲು ನಿಲ್ದಾಣದಲ್ಲಿ ನಡೆದಿದೆ.
ಜಲ್ಲಿಗುಡ್ಡೆಯ ಬಜಾಲ್‌ಕೋಡಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ನಾಮ ಜಯರಾಜ್ (26) ಎಂಬತನೇ ದುಷ್ಕರ್ಮಿಗಳಿಂದ ಹತ್ಯೆಗೀಡಾದ ವ್ಯಕ್ತಿ ಎಂದು ತಿಳಿದು ಬಂದಿದೆ.ಘಟನೆ ಬುಧವಾರ ತಡ ರಾತ್ರಿ ನಡೆದಿರಬೇಕೆಂದು ಶಂಕಿಸಲಾಗಿದೆ. ಗುರುವಾರ ಬೆಳಗಿನ ಜಾವ ಶವವನ್ನು ನೋಡಿ ಪ್ರಯಾಣಿಕರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪಾಂಡೆ ಶ್ವರ ಪೊಲಿಸರೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್‌ಲಾಕ್ ಆಸ್ಪತ್ರಗೆ ರವಾನಿಸಲಾಗಿದೆ.