ಕುಂದಾಪುರ: ಮಾಜಿ ಶಾಸಕ ಯಡ್ತರೆ ಮಂಜಯ್ಯ ಶೆಟ್ಟಿ ಅವರ ಸ್ಮರಣಾರ್ಥ, ಯಡ್ತರೆ ಮಂಜಯ್ಯ ಶೆಟ್ಟಿ ಜಯಂತಿ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ತಾ 26 ರಂದು ಮಧ್ಯಾಹ್ನ 3 ಗಂಟೆಗೆ ಕುಂದಾಪುರದ ಆರ್.ಎನ್.ಶೆಟ್ಟಿ ಕಲ್ಯಾಣ ಭವನದಲ್ಲಿ ಜರುಗಲಿದೆ.
ಕರ್ನಾಟಕದ ಲೋಕಾಯುಕ್ತರಾಗಿ ಭ್ರಷ್ಟಾಚಾರ ವಿರುದ್ದ ಹೋರಾಟದಲ್ಲಿ ಬಹಳ ಯಶಸ್ಸು ಪಡೆದ ಹಾಗೂ ಆನಂತರವೂ ಭ್ರಷ್ಟಾಚಾರದ ವಿರುದ್ದ ಹೋರಾಟ ಮುಂದುವರಿಸಿರುವ ಜಸ್ಟಿಸ್ ಎನ್ ಸಂತೋಷ್ ಹೆಗ್ಡೆ.
ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಕರ್ನಾಟಕದ ಬಹುತೇಕ ಗ್ರಾಮೀಣ ಪ್ರದೇಶಕ್ಕೆ ವಿಸ್ತರಿಸಿ ಜನಸಾಮಾನ್ಯರ ಬಾಳಿನಲ್ಲಿ ಹೊಸ ಬೆಳಕು ಮೂಡಿಸುವಲ್ಲಿ ಶ್ರಮವಹಿಸಿದ ಡಾ.ಎಲ್.ಎಚ್.ಮಂಜುನಾಥ್.
ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ಕಥೆ, ಕವನ ಕಾದಂಬರಿ ನಾಟಕ ಹಾಗೂ ಬರಹಗಳ ಮೂಲಕ ಜಿಲ್ಲೆಗೆ ಖ್ಯಾತಿ ತಂದಿರುವ ಜಾನಕಿ ಶ್ರೀನಿವಾಸ ಮೂರ್ತಿ(ವೈದೇಹಿ) ಯವರಿಗೆ ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಯಡ್ತರೆ ಮಂಜಯ್ಯ ಶೆಟ್ಟಿ ಟ್ರಸ್ಟ್‌ನ ಅಧ್ಯಕ್ಷ ಬಿ.ಜಗನ್ನಾಥ ಶೆಟ್ಟಿ ಹಾಗೂ ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ತಿಳಿಸಿದ್ದಾರೆ.