ಕುಂದಾಪುರ: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಒಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶನಿವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮರವಂತೆ ಸೀಲ್ಯಾಂಡ್ ಸಮೀಪದಲ್ಲಿ ಸಂಭವಿಸಿದೆ.
ಕಾರಿನ ಮುಂಭಾಗದಲ್ಲಿ ಕುಳಿತಿದ್ದ ಹೊನ್ನಾವರ ನಿವಾಸಿ ರಾಮಚಂದ್ರ (38) ಅಪಘಾತದಲ್ಲಿ ಗಾಯಗೊಂಡವರು.
ಹೊನ್ನಾವರದಿಂದ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ರೋಗಿಯೋರ್ವರನ್ನು ನೋಡಲು ಹೋಗುತ್ತಿದ್ದ ವೇಳೆ ಕುಂದಾಪುರದಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ಲಾರಿ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಇದರಿಂದಾಗಿ ಮುಂಭಾಗದಲ್ಲಿ ಕುಳಿತಿದ್ದ ರಾಮಚಂದ್ರ ಗಾಯಗೊಂಡಿದ್ದು ಚಾಲಕ ಹಾಗೂ ಕಾರಿನಲ್ಲಿದ್ದ ಇನ್ನು ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ತೀವೃತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ರಸ್ತೆಯಲ್ಲಿ ತಿರುಗಿ ನಿಂತಿತ್ತು. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.