ಉಡುಪಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರದಾದ್ಯಂತ ನವೆಂಬರ್ 7 ರಿಂದ 11 ರವರೆಗೆ ರಾಷ್ಟ್ರೀಯ ಶಿಕ್ಷಣ ಅಭಿಯಾನ ಎನ್ನುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರ ಪ್ರಯುಕ್ತ ಉಡುಪಿ ಜಿಲ್ಲಾ ಘಟಕದ ವತಿಯಿಂದ ಕ್ಯಾಂಪಸ್ ಫ್ರಂಟ್ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದ ಭಾಗವಾಗಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿ ನಂತರ ವಿವಿಧ ಶಾಲೆ, ಅಂಗನವಾಡಿ ಕೇಂದ್ರ ಹಾಗೂ ಬುದ್ಧಿಮಾಂದ್ಯ ಮಕ್ಕಳ ಶಾಲೆಗಳಿಗೆ ಭೇಟಿ ನೀಡಿ ಅವರೊಂದಿಗೆ ಸಮಯವನ್ನು ಕಳೆಯುವುದರ ಮೂಲಕ ಹಾಗೂ ಅವರಿಗೆ ಸಿಹಿ ತಿಂಡಿಯನ್ನು ವಿತರಿಸುವ ಮೂಲಕ ಆಚರಿಸಲಾಯಿತು.
ಸಂಜೆ ಉಡುಪಿ ಸಿ.ಎಸ್.ಐ. ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ವಿವಿಧ ಆಟೋಪ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸುವ ಮೂಲಕ ಕ್ಯಾಂಪಸ್ ಫ್ರಂಟ್ ಸಂಸ್ಥಾಪನಾ ದಿನವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್‌ನ ಪದಾಧಿಕಾರಿಗಳಾದ ಆವೇಝ್ ಮಲ್ಪೆ, ಪರೇಶ್, ರಿಹಾನ್, ಸದಾಬ್, ನಾಝಿಲ್, ಪವಾಝ್ ಕಂಡ್ಲೂರು ಮುಂತಾದವರು ಉಪಸ್ಥಿತರಿದ್ದರು.