ಕರಾವಳಿ

ನುಗ್ಗೆ ಸೊಪ್ಪು ಉಪಯೋಗ…

Pinterest LinkedIn Tumblr

Drumstick-leaves

ನುಗ್ಗೇಕಾಯಿಯನ್ನು ಅನೇಕ ರೋಗಗಲಿಗೆ ರಾಮಬಾಣವಾಗಿದೆ. ಆದರೆ ನುಗ್ಗೆ ಸೊಪ್ಪು ಉತ್ತಮ ಆಹಾರವಾಗಿದ್ದು ಹಲವು ತೊಂದರೆಗಳಿಗೆ ಸಮರ್ಥ ಔಷಧಿಯೂ ಆಗಿದೆ. ಇದು ರುಚಿಕರವೂ, ಹೆಚ್ಚಿನ ನಾರು ಹೊಂದಿರುವ ಸೊಪ್ಪೂ ಆಗಿರುವ ಕಾರಣ ದಕ್ಷಿಣ ಭಾರತದಲ್ಲಿ ಸಾಂಬಾರ್ ಅಥವಾ ಪಲ್ಯದಲ್ಲಿ ಹೆಚ್ಚಾಗಿ ಉಪಯೋಗಿಸುತ್ತಾರೆ.

ನುಗ್ಗೆಕಾಯಿಯಂತೆ ನುಗ್ಗೆ ಸೊಪ್ಪಿನಲ್ಲಿಯೂ ಹಲವಾರು ಆಂಟಿ ಆಕ್ಸಿಡೆಂಟುಗಳೂ ಮತ್ತು ಇತರ ಅಗತ್ಯ ಪೋಷಕಾಂಶಗಳೂ ಲಭ್ಯವಿದ್ದು ಮುಖ್ಯವಾಗಿ ರಕ್ತದಲ್ಲಿ ಕೊಲೆಸ್ಟ್ರಾಲ್ ಮಟ್ಟ ಕಡಿಮೆಗೊಳಿಸುವಲ್ಲಿ ಹಾಗೂ ಅಧಿಕ ರಕ್ತದ ಒತ್ತಡವನ್ನು ಕಡಿಮೆಗೊಳಿಸುವಲ್ಲಿ ನೆರವಾಗುತ್ತದೆ.

ಇವು ಮಧುಮೇಹಿಗಳ ರಕ್ತದಲ್ಲಿ ಅಧಿಕ ಪ್ರಮಾಣದಲ್ಲಿರುವ ಸಕ್ಕರೆಗೆ ವಿರುದ್ಧವಾಗಿ ಕೆಲಸ ಮಾಡುತ್ತವೆ. ಪರಿಣಾಮವಾಗಿ ರಕ್ತ ಸಕ್ಕರೆಯನ್ನು ಸಹಿಸಿಕೊಳ್ಳುವ ಶಕ್ತಿ ಹೆಚ್ಚಿಸುತ್ತದೆ ಹಾಗೂ ರಕ್ತದಲ್ಲಿ ಥಟ್ಟನೇ ಅಧಿಕ ಪ್ರಮಾಣದ ರಕ್ತ ನುಗ್ಗದಿರುವಂತೆ ನೋಡಿಕೊಳ್ಳುತ್ತದೆ.

ಅಲ್ಲದೇ ನೈಟ್ರಿಕ್ ಆಮ್ಲದ ಪ್ರಮಾಣದಲ್ಲಿ ಗಣನೀಯವಾದ ಇಳಿಕೆ ಮತ್ತು ರಕ್ತದ ನೀರಿನಲ್ಲಿ ಗ್ಲೂಕೋಸ್ ಮಟ್ಟ ಕಡಿಮೆಗೊಳಿಸಿ ಇನ್ಸುಲಿನ್ ಮತ್ತು ಪ್ರೋಟೀನುಗಳನ್ನು ಹೆಚ್ಚಿಸುತ್ತದೆ. ಇದರಿಂದ ರಕ್ತದಲ್ಲಿ ಗ್ಲೂಕೋಸ್ ಮಟ್ಟ ಆರೋಗ್ಯಕರವಾಗಿರಲು ನೆರವಾಗುತ್ತದೆ.

ನುಗ್ಗೆಸೊಪ್ಪಿನಲ್ಲಿರುವ ಪೋಷಕಾಂಶಗಳು ಈ ಸಂಗ್ರಹವನ್ನು ಸಡಿಲಗೊಳಿಸಿ ಪ್ರತಿ ಕಣಗಳು ಬಿಡಿಬಿಡಿಯಾಗುವಂತೆ ಮಾಡುವ ಮೂಲಕ ಕೆಟ್ಟ ಕೊಲೆಸ್ಟ್ರಾಲ್ನ ಪ್ರಮಾಣ ಕಡಿಮೆ ಮಾಡುತ್ತವೆ. ಇದರಿಂದ ರಕ್ತದಲ್ಲಿ ಒಟ್ಟು ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಮಟ್ಟ ಕಡಿಮೆಯಾಗುತ್ತದೆ ಮತ್ತು ಕರುಳಿನ ಮೂಲಕ ಇನ್ನಷ್ಟು ಕೊಲೆಸ್ಟ್ರಾಲ್ ಹೀರುವುದನ್ನೂ ತಡೆಯುತ್ತದೆ.

ಆಂಟಿ ಆಕ್ಸಿಡೆಂಟುಗಳು ಕೊಬ್ಬು ರಕ್ತನಾಳಗಳ ಒಳಗೆ ಸಂಗ್ರಹವಾಗುವ ಅಧಿಕ ರಕ್ತದೊತ್ತಡ ಮತ್ತು ಇತರ ಸಂಬಂಧಿತ ಕಾಯಿಲೆಗಳಿಂದ ರಕ್ಷಣೆ ನೀಡುತ್ತದೆ.

ನುಗ್ಗೆಸೊಪ್ಪನ್ನು ದಂಟಿನಿಂದ ಬಿಡಿಬಿಡಿಯಾಗಿ ಬಿಡಿಸಿ ನೇರವಾಗಿ ತಿಳಿಸಾರು, ಮಜ್ಜಿಗೆ ಹುಳಿ, ತಂಬುಳಿ, ಮೊದಲಾದ ರೂಪದಲ್ಲಿಯೂ ಸೇವಿಸಬಹುದು. ಇನ್ನೊಂದು ವಿಧಾನವೆಂದರೆ ಕೊಂಚ ಬೇಯಿಸಿದ ಎಲೆಗಳನ್ನು ಚಪಾತಿ ಹಿಟ್ಟಿನ ಜೊತೆಗೆ ಕಲಸಿ ಲಟ್ಟಿಸಿ ಪರೋಟಾ ಅಥವಾ ಚಪಾತಿಯ ರೂಪದಲ್ಲಿಯೂ ಸೇವಿಸಬಹುದು. ಈ ರೀತಿ ಮಾಡುವುದರಿಂದ ದೇಹ ಬೇಕಾದ ಉಷ್ಣಾಂಶ ಹಾಗೂ ಪೋಷಕಾಂಶಗಳನ್ನು ಸುಲಭವಾಗಿ ಪಡೆಯಬಹುದು.

Write A Comment