ಬೆಳ್ತಂಗಡಿ, ಜೂ.10: ವೇಣೂರಿನ ಮಿಯಲಾಜೆಯ ವ್ಯಕ್ತಿಯೊಬ್ಬರು ಶಂಕಿತ ಡೆಂಗ್ ಜ್ವರಕ್ಕೆ ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ವೇಣೂರಿನ ಸಮೃದ್ಧಿ ನಿವಾಸಿ ಪ್ರಕಾಶ್ ಹೆಗ್ಡೆ (48)ಎಂದು ಗುರುತಿಸಲಾಗಿದೆ.
4 ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಕಾರಣ ಪ್ರಕಾಶ್ ಹೆಗ್ಡೆಯವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ ತಹಬದಿಗೆ ಬರದ ಕಾರಣ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆಗೆ ಸ್ಪಂದಿಸದ ಕಾರಣ ಅವರು ಗುರುವಾರ ಮೃತಪಟ್ಟಿದ್ದಾರೆ. ಇವರು ಬಜಿರೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಪ್ರಗತಿಪರ ಕೃಷಿಕರಾಗಿದ್ದ ಮೃತರು ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರೂ ಆಗಿದ್ದರು. ಮೃತರು ಪತ್ನಿ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
Comments are closed.