ಕರಾವಳಿ

ಡೆತ್‌ನೋಟ್‌ನಲ್ಲಿ ಹೆಸರಿರುವವರ ವಿರುದ್ಧ ಸಿಬಿಐ ತನಿಖೆಗೆ ಜಿಲ್ಲಾ ಬಿಜೆಪಿ ಆಗ್ರಹ

Pinterest LinkedIn Tumblr

bjp_meet_photo_1

ಮಂಗಳೂರು, ಜು.8 : ಅಧಿಕಾರಿಗಳು ಮತ್ತು ಸಚಿವರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೊಳಪಡಿಸಬೇಕು ಎಂದು ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷ ಸಂಜೀವ.ಕೆ ಮಠಂದೂರ್ ಆಗ್ರಹಿಸಿದ್ದಾರೆ.

ಶುಕ್ರವಾರ ಮಂಗಳೂರಿನ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಂಗಳೂರು ಐಜಿ ಕಚೇರಿಯಲ್ಲಿ ಕರ್ತವ್ಯ ನಿರ್ವಾಹಿಸುತ್ತಿದ್ದ ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆಗೂ ಮುನ್ನ ಬರೆದಿರುವ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿರುವ ಅಧಿಕಾರಿಗಳನ್ನು ಮತ್ತು ಸಚಿವರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ.

bjp_meet_photo_3 bjp_meet_photo_2

ಈಗಿನ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಯಾವ ಅಧಿಕಾರಿಯು ನಿಷ್ಪಕ್ಷಪಾತವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಸಚಿವರುಗಳ ಹಸ್ತಕ್ಷೇಪ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ ಅವರು, ಡಿವೈಎಸ್ಪಿ ಎಂ.ಕೆ ಗಣಪತಿ ಅವರು ಸಾವಿಗೆ ಮುಂಚೆ ಹೆಸರಿಸಿರುವವರು ಆತ್ಮಹತ್ಯೆಗೆ ಪ್ರೇರಣೆ ನೀಡಿದವರಾಗಿರುವುದರಿಂದ ಅವರನ್ನು ಕೂಡಲೇ ಬಂಧಿಸಿ ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳ ಬೇಕು ಎಂದು ಸಂಜೀವ ಮಠಂದೂರ್ ಒತ್ತಾಯಿಸಿದ್ದಾರೆ

ಮಾಜಿ ಶಾಸಕ ಯೋಗೀಶ್ ಭಟ್, ಪಕ್ಷದ ಪ್ರಮುಖರಾದ ಉಮಾನಾಥ್ ಕೋಟ್ಯಾನ್, ರವಿಶಂಕರ್ ಮಿಜಾರ್, ಸುದರ್ಶನ್, ಸಂಜಯ್ ಪ್ರಭು ಮುಂತಾದವರು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Comments are closed.