ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ, ಕುಂದಾಪುರ ವಕೀಲರ ಸಂಘ (ರಿ), ಅಭಿಯೋಗ ಇಲಾಖೆ, ಅರಣ್ಯ ಇಲಾಖೆ, ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಮತ್ತು ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಜುಲೈ19ರಂದು ಆರಂಭಗೊಂಡ ವನಮಹೋತ್ಸವ ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭವು ಸೋಮವಾರ ಕುಂದಾಪುರದ ಶ್ರೀ ವೆಂಕರಮಣ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ನಡೆಯಿತು.
ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕುಂದಾಪುರ ವಕೀಲರ ಸಂಘದ (ರಿ), ಕುಂದಾಪುರ ಇದರ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ, ಕೇವಲ ಗಿಡಗಳನ್ನು ನೆಡುವುದು ಮಾತ್ರ ಮುಖ್ಯವಲ್ಲ. ನೆಟ್ಟ ಗಿಡಗಳನ್ನು ಫೋಷಿಸಬೇಕಾದುದು ಕೂಡಾ ಮುಖ್ಯ ಎಂದರಲ್ಲದೆ, ಎಲ್ಲಾ ವಿದ್ಯಾರ್ಥಿಗಳು ಒಂದೊಂದು ಗಿಡ ನೆಟ್ಟು, ನಂತರ ಪ್ರತೀ ದಿನವೂ ಅವುಗಳನ್ನು ಪೋಷಿಸಿ ಬೆಳೆಸಿ ಗಿಡಗಳ ಹುಟ್ಟು ಹಬ್ಬಗಳನ್ನ ಆಚರಿಸಿ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.
ಸಹಾಯಕ ಸರಕಾರಿ ಅಭಿಯೋಜಕರಾದ ಸಂದೇಶ ಭಂಡಾರಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್. ರವೀಶ್ಚಂದ್ರ ಶೆಟ್ಟಿ, ಉಪ ಅರಣ್ಯಾಧಿಕಾರಿಯವರಾದ ದಿಲೀಪ್, ಶ್ರೀ ವೆಂಕಟರಮಣ ಇಂಗ್ಲೀಷ್ ಮೀಡಿಯಂ ಪ್ರೈಮರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಶೀಲ ಮುಖ್ಯ ಅತಿಥಿಗಳಾಗಿದ್ದರು.
ಶ್ರೀ ವೆಂಕಟರಮಣ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ನ ಪ್ರಾಂಶುಪಾಲೆ ರೂಪಾ ಶೆಣೈ ಪ್ರಾಸ್ತವಿಕವಾಗಿ ಮಾತನಾಡಿದರು. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗೇಶ್ ಶ್ಯಾನುಭಾಗ್ ಸ್ವಾಗತಿಸಿದರು. ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ನ ಪ್ರಾಧ್ಯಾಪಕರಾದ ಸುರೇಶ್ ತಿಂಗಳಾಯ ಕಾರ್ಯಕ್ರಮ ನಿರೂಪಿಸಿದರು ಹಾಗೂ ಪ್ರಾಧ್ಯಾಪಕರಾದ ಶಿವರಾಜ್ ವಂದಿಸಿದರು.
Comments are closed.