ಕರಾವಳಿ

ಕರ್ನಾಟಕ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಕ್ವಿಜ್ ಸ್ಪರ್ಧೆ “ಚಾಣಕ್ಯ-2016′

Pinterest LinkedIn Tumblr

KJU_Quz_Pro_1

ಮಂಗಳೂರು : ಪತ್ರಿಕಾ ದಿನಾಚರಣೆಯ ಅಂಗವಾಗಿ ಕರ್ನಾಟಕ ಪತ್ರಕರ್ತರ ಸಂಘದ ವತಿಯಿಂದ ವಾರ್ತಾ ಮತ್ತು ಪ್ರಚಾರ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಕ್ವಿಜ್ ಸ್ಪರ್ಧೆ ‘ಚಾಣಕ್ಯ-2016’ ಕಾರ್‍ಯಕ್ರಮವು ಶನಿವಾರ ನಗರದ ಪುರಭವನದಲ್ಲಿ ನಡೆಯಿತು. 

ಕಾರ್ಯಕ್ರಮವನ್ನು ಮಂಗಳೂರು ನಗರ ಪೋಲಿಸ್ ಆಯುಕ್ತ ಎಂ. ಚಂದ್ರಶೇಖರ್‌ ಅವರು ಉದ್ಘಾಟಿಸಿ, ಶುಭಕೋರಿದರು.

ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಎಮ್.ಬಿ.ಶಿವುಪೂಜಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ಜಿ, ಮೂಡ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ. ದ.ಕ.ಡಿಡಿಪಿಐ ವಾಲ್ಟರ್ ಡಿ’ಮೆಲ್ಲೋ, ಕಸಾಪ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮಧರ್ಶಿ ಹರಿಕೃಷ್ಣ ಪುನರೂರು, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಬಹುಭಾಷ ಕವಿ ಮೊಹಮ್ಮದ್ ಬಡ್ಡೂರ್ ಮುಂತಾದವರು ಅತಿಥಿಗಳಾಗಿದ್ದರು.

KJU_Quz_Pro_2 KJU_Quz_Pro_3 KJU_Quz_Pro_5

ಕರ್ನಾಟಕ ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್ ಅತಿಥಿಗಳನ್ನು ಸ್ವಾಗತಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಮಾಧ್ಯಮದಲ್ಲಿ ನಡೆದ ಕ್ವಿಜ್ ಸ್ಪರ್ಧೆಯ ಸಾರಥ್ಯವನ್ನು ಎಸ್.ಡಿ.ಎಂ ಲಾ ಕಾಲೇಜಿನ ಉಪ ಪ್ರಾಂಶುಪಾಲರಾದ ಉದಯಾನಂದ ಅವರು ಮತ್ತು ಬಂಟ್ವಾಳದ ಸರ್ಕಾರಿ ಕಾಲೇಜಿನ ಪ್ರಾದ್ಯಾಪಕರಾದ ರಝಾಕ್ ಅವರು ವಹಿಸಿದ್ದರು.

ಇದೇ ಸಂದರ್ಭದಲ್ಲಿ ವಾರ್ತಾ ಇಲಾಖೆ ಸಹಯೋಗದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

KJU_Quz_Pro_6 KJU_Quz_Pro_7 KJU_Quz_Pro_8

ಸಮಾರೋಪ ಸಮಾರಂಭ : ಬಹುಮಾನ ವಿತರಣೆ

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಸಚಿವರುಗಳು, ಶಾಸಕರು, ಸಂಸದರು ಸಹಿತ ಜಿಲ್ಲೆಯ ಹಲವು ಗಣ್ಯರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕ್ವಿಜ್ ಸ್ಪರ್ಧೆಯ ವಿಜೇತ ತಂಡಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು. ಹಾಗೂ ಸ್ಫರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ಪ್ರಮಾಣ ಪತ್ರ ವಿತರಿಸಲಾಯಿತು.

Comments are closed.