ಮಂಗಳೂರು,ಆಗಸ್ಟ್.15: ದ. ಕ. ಜಿಲ್ಲಾ ಬಿಜೆಪಿ ವತಿಯಿಂದ ನಗರದ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿಂದು ಸೋಮವಾರ ಅಯೋಜಿಸಲಾದ `ಸ್ವಾತಂತ್ರ್ಯ 70ರ ಸಂಭ್ರಮ’ ಕಾರ್ಯಕ್ರಮವನ್ನು ಕೇಂದ್ರ ಕೌಶಲಾಭಿವೃದ್ಧಿ ಹಾಗೂ ವಾಣಿಜೋದ್ಯಮ ಸಚಿವ ರಾಜೀವ್ ಪ್ರತಾಪ್ ರೂಡಿ ಅವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಯುವಜನರೇ ದೇಶದ ಭವಿಷ್ಯ. ಉತ್ತಮ ಶಿಕ್ಷಣದೊಂದಿಗೆ ಸೂಕ್ತ ಮಾರ್ಗದರ್ಶನ ಲಭ್ಯವಾದಾಗ ಮಾತ್ರ ಯುವ ಸಂಪತ್ತಿನ ಸದ್ಭಳಕೆ ಸಾಧ್ಯ,ಯುವಜನತೆಯನ್ನು ಗಮನದಲ್ಲಿರಿಸಿಕೊಂಡು ಪ್ರಧಾನಿ ಮೋದಿಯವರು ಹೆಚ್ಚಿನ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ. ಪ್ರಜಾಪ್ರಭುತ್ವ ಬಲಗೊಂಡಾಗ ಮಾತ್ರ ದೇಶ ಬಲಿಷ್ಠವಾಗಲು ಸಾಧ್ಯ ಎಂದು ಹೇಳಿದರು.
ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತ ಹಾಗೂ ಹೋರಾಟ ನಡೆಸಿದವರನ್ನು ನೆನಪಿಸುತ್ತಲೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಬೇಕು. ದೇಶಾದ್ಯಂತ ಸಂಚರಿಸಿ ಸ್ವಾತಂತ್ರ್ಯ ಹೋರಾಟಗಾರನ್ನು ಗೌರವಿಸುವ ಜತೆಗೆ ಸ್ವಾತಂತ್ರ್ಯೋತ್ಸವದ ವಿವಿಧ ಕಾರ್ಯಕ್ರಮಗಳನ್ನು ಕೇಂದ್ರ ಸರಕಾರ ಹಮ್ಮಿಕೊಂಡಿದೆ ಎಂದವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ವಹಿಸಿದ್ದರು. ವಿಧಾನ ಪರಿಷತ್ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್, ದ. ಕ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಪಾಲಿಕೆ ಉಪ ಮೇಯರ್ ಸುಮಿತ್ರ ಕರಿಯ, ದ. ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ಸೇರಿದಂತೆ ಪಕ್ಷದ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Comments are closed.