ಮಂಗಳೂರು, ಅ.15: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯನ್ನು ವಿಭಜಿಸಿ ನೂತನವಾಗಿ ಗರೋಡಿ ಸಮೀಪ ನಿರ್ಮಿಸಲಾದ ಕಂಕನಾಡಿ ನಗರ ಪೊಲೀಸ್ ಠಾಣೆ ಶುಕ್ರವಾರ ಉದ್ಘಾಟನೆಗೊಂಡಿತ್ತು.
ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ನೂತನ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ, ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿರಬೇಕು. ಪೊಲೀಸ್ ಠಾಣೆಗಳು ವರ್ತಮಾನ, ಸಾಮಾಜಿಕ ಸಾಮರಸ್ಯಕ್ಕೆ ಒತ್ತು ನೀಡಬೇಕಾಗಿದೆ ಎಂದು ಹೇಳಿದರು.
ಶಾಸಕ ಜೆ.ಆರ್ ಲೋಬೊ, ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಮಂಗಳೂರು ನಗರ ಪೊಲೀಸ್ ಕಮೀಷನರ್ ಚಂದ್ರಶೇಖರ್, ಮಂಗಳೂರು ಉಪ ಪೊಲೀಸ್ ಆಯುಕ್ತ ಕೆ.ಎಂ ಶಾಂತರಾಜು, ಡಾ.ಸಂಜೀವ ಎಂ. ಪಾಟೀಲ್ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಂಕನಾಡಿ ನಗರ ಠಾಣೆಯ ವ್ಯಾಪ್ತಿ:
ಕಂಕನಾಡಿ ನಗರ ಪೊಲೀಸ್ ಠಾಣೆಯ ರಚನೆಗೆ ಹಿಂದಿನ ಗೃಹ ಸಚಿವ ಕೆ.ಜೆ.ಜಾರ್ಜ್ ಅವರಲ್ಲಿ ಮನವಿ ಮಾಡಲಾಗಿತ್ತು. ಅದಕ್ಕೆ ಸ್ಪಂದಿಸಿ ಅದನ್ನು ಮಂಜೂರು ಮಾಡಿದ್ದರು. ಮಂಗಳೂರು ಕಮಿಷನರ್ ಚಂದ್ರಶೇಖರ್ ಅವರ ಶ್ರಮದಿಂದ ಹೊಸ ಠಾಣೆ ಆಗಿದೆ.ಪದವು, ಅಳಪೆ, ಮರೋಳಿ, ಕಂಕನಾಡಿ , ಜೆಪ್ಪಿನಮೊಗರು, ಬಜಾಲ್, ಕಣ್ಣೂರು, ಆಡಂಕುದ್ರು ಪ್ರದೇಶಗಳು ಕಂಕನಾಡಿ ನಗರ ಠಾಣಾ ವ್ಯಾಪ್ತಿಗೆ ಸೇರಲಿವೆ.
Comments are closed.