ಮಂಗಳೂರು, ನ.17: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರಾವಳಿ ಕುರುಬರ ಸಂಘದ ಸಂಯುಕ್ತ ಅಶ್ರಯದಲ್ಲಿ ಗುರುವಾರ ನಗರದ ಪುರಭವನದಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ ಕಾರ್ಯಕ್ರಮವನ್ನು ಉದ್ಘಾಟಿಸಿ, ಕನಕದಾಸರು ಕೀರ್ತನೆ ಮೂಲಕವೇ ಜಾತಿ ರಹಿತ ಸಮಾಜದ ಬಗ್ಗೆ ಜಾಗೃತಿ ಮೂಡಿಸಿದ್ದರು. ಆದರೆ ಪ್ರಸಕ್ತ ಸಮಾಜದಲ್ಲಿ ಶಾಸಕಾಂಗ, ರಾಜ್ಯಾಂಗ ಮಾತ್ರವಲ್ಲದೆ ಪತ್ರಿಕಾರಂಗದಲ್ಲೂ ಜಾತಿ ಸುಳಿದಾಡುತ್ತಿದೆ. ಜಾತಿ ಮುಕ್ತ ಭಾರತ ನಿರ್ಮಾಣಕ್ಕೆ ಪ್ರಯತ್ನವಾಗಬೆಕು. ಜಾತಿಯ ಹೆಸರಿನಲ್ಲಿ ರಾಜಕೀಯ ಮಾಡದೆ ಸಮಾಜವನ್ನು ಒಗ್ಗೂಡಿಸುವ ಕೆಲಸ ಆಗಬೇಕು ಎಂದು ಹೇಳಿದರು.
ಶಾಸಕರಾದ ಜೆ.ಆರ್.ಲೋಬೋ, ಮೊಯ್ದಿನ್ ಬಾವ, ಮೇಯರ್ ಹರಿನಾಥ್, ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಮುಹಮ್ಮದ್ ಹನೀಫ್, ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಗೇರು ನಿಗಮ ಅಧ್ಯಕ್ಷ ಬಿ.ಎಚ್ ಖಾದರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಡಾ.ಜಗದೀಶ್, ಅಪರ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ, ಡಿಸಿಪಿ ಶಾಂತರಾಜು, ಕರಾವಳಿ ಕುರುಬರ ಸಂಘದ ಅಧ್ಯಕ್ಷ ಡಾ.ಕೆ.ಇ ಪ್ರಕಾಶ್, ವಾರ್ತಾಧಿಕಾರಿ ಖಾದರ್ ಶಾ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Comments are closed.