ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ ವತಿಯಿಂದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಡಿಸೆಂಬರ್ 11 ಭಾನುವಾರ ಬೆಳಗ್ಗೆ 8.30ರಿಂದ ನಗರದ ನೆಹರು ಮೈದಾನ ಬಳಿಯ ಫುಟ್ಬಲ್ ಮೈದಾನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಮೂಡಬಿದ್ರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವ ನೆರವೇರಿಸಲಿದ್ದಾರೆ.
File Photos
ಮುಖ್ಯ ಅತಿಥಿಯಾಗಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹರಿನಾಥ ಜೋಗಿ ಹಾಗೂ ಪಾಲಿಕೆಯ ಆಯುಕ್ತ ಮೊಹಮ್ಮದ್ ನಝೀರ್ ಪಾಲ್ಗೊಳ್ಳಲಿದ್ದಾರೆ. ಸಂಘದ ಅಧ್ಯಕ್ಷ ಜಗನಾಥ ಶೆಟ್ಟಿ ಬಾಳ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
Comments are closed.