ಕುಂದಾಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿದ್ದ ಫ್ಲೆಕ್ಸ್ ಬ್ಯಾನರ್ ವಿರೂಪಗೊಳಿಸಿದ ಕಿಡಿಗೇಡಿಗಳ ಪತ್ತೆಹಚ್ಚಿ ಕಾನೂನು ಕ್ರಮಕೈಗೊಳ್ಳುವಂತೆ ಕೋಟ ಪೊಲೀಸರಿಗೆ ದೂರು ನೀಡಲಾಗಿದೆ.
ಇತ್ತೀಚೆಗೆ ಕುಂದಾಪುರ ತಾಲೂಕಿನ ಮೊಳಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ದಲಿತ ಜಾಗೃತಿ ಸಮಾವೇಶದ ಉದ್ಘಾಟನೆ ಪ್ರಯುಕ್ತ ಪ್ರಚಾರಕ್ಕಾಗಿ ಸ್ಥಳಿಯ ಪಂಚಾಯತ್ ಪರವಾನಿಗೆ ಪಡೆದು ಮೊಳಹಳ್ಳಿ ಗ್ರಾಮದ ಮಾಸ್ತಿಕಟ್ಟೆ ಸರ್ಕಲ್‌ನಲ್ಲಿ 8*5 ಅಳತೆಯ ಅಂಬೇಡ್ಕರ್‌ರವರ ಭಾವಚಿತ್ರವಿರುವ ಫ್ಲೆಕ್ಸ್ ಬ್ಯಾನರನ್ನು ಅಳವಡಿಸಿದ್ದು ರಾತ್ರೋರಾತ್ರಿ ಕಿಡಿಗೇಡಿಗಳು ಆ ಬ್ಯಾನರ್ ಹರಿದು ಹಾಕಿ ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್‌ರವರ ಭಾವಚಿತ್ರವನ್ನು ವಿರೂಪಗೊಳಿಸಿದ್ದಾರೆ. ಈ ಬಗ್ಗೆ ಕೊಟ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದ್ದು ಕಿಡಿಗೇಡಿಗಳ ಪತ್ತೆಗಾಗಿ ಬಲೆಬೀಸಲಾಗಿದೆ.
Comments are closed.