ಕರಾವಳಿ

ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಆರ್ ಟಿಐ ಕಾರ್ಯಕರ್ತ ಬಾಳಿಗ ತಾಯಿ ಲಕ್ಷ್ಮಿ ಬಾಳಿಗ ದೈವಧೀನ

Pinterest LinkedIn Tumblr

ಮಂಗಳೂರು, ಜ.8 : ಕಳೆದ ವರ್ಷ ಮಾರ್ಚ್ 21ರಂದು ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ನಗರದ ಆರ್ ಟಿಐ ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗ ಅವರ ತಾಯಿ ಶ್ರೀಮತಿ ಲಕ್ಷ್ಮಿ ಬಾಳಿಗ( 82)ಇಂದು ದೈವಧೀನರಾಗಿದ್ದಾರೆ.

ಪುತ್ರನ ನಿಧನ ನಂತರ ತೀರಾ ಖಿನ್ನರಾಗಿದ್ದು, ಅಸೌಖ್ಯದಿಂದ ಬಳಲುತ್ತಿದ್ದ ಅವರು ಇತ್ತೀಚಿಗೆ ಕುಸಿದು ಬಿದ್ದು ತಲೆಗೆ ಏಟು ತಗುಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾದೆ ಬಾನುವಾರ ನಿಧನ ಹೊಂದಿದ್ದರು.

ಮಂಗಳೂರಿನ ಆರ್ ಟಿಐ ಕಾರ್ಯಕರ್ತರಾಗಿದ್ದ ವಿನಾಯಕ ಬಾಳಿಗರನ್ನು ಕಳೆದ ಮಾರ್ಚ್ 21ರಂದು ಹತ್ಯೆಗೈಯಲಾಗಿತ್ತು.

ದಿನಾಂಕ: 21-03-2016 ರಂದು ವಿನಾಯಕ ಪಾಂಡುರಂಗ ಬಾಳಿಗರವರು ಪ್ರತೀ ದಿನದಂತೆ ಬೆಳಿಗ್ಗೆ 05-45 ಗಂಟೆಗೆ ವೆಂಕಟರಮಣ ದೇವಸ್ಥಾನಕ್ಕೆ ಹೋಗಲು ತನ್ನ ಸ್ಕೂಟರ್ ಹೋಂಡಾ ಪ್ಲೆಸರ್ ಕೆ.ಎ.19.ಇ.ಡಿ 3098 ರಲ್ಲಿ ಮನೆಯಿಂದ ಹೊರಟು ಸುಮಾರು 75 ಮೀಟರ್ ದೂರ ಹೋಗುವಷ್ಟರಲ್ಲಿ ವಿನಾಯಕ ಪಾಂಡುರಂಗ ಬಾಳಿಗರನ್ನು ತಡೆದು ನಿಲ್ಲಿಸಿದ ಮೂವರು ವ್ಯಕ್ತಿಗಳು ಯದ್ವಾತದ್ವಾ ತಲವಾರಿನಿಂದ ಕಡಿದು ಅವರು ಬಂದ ಬೈಕ್ ನಲ್ಲಿ ಪರಾರಿಯಾಗಿದ್ದರು,

Comments are closed.