ಕರಾವಳಿ

ವೆಬ್ ಸೈಟ್ ಮೂಲಕ ಹೈಟೆಕ್ ವೇಶ್ಯಾವಾಟಿಕೆ : ಲಕ್ಷಾಂತರ ಮೌಲ್ಯದ ಸೊತ್ತು ಸಹಿತಾ ಇಬ್ಬರು ಪಿಂಪ್‌ಗಳ ಬಂಧನ

Pinterest LinkedIn Tumblr

ಮಂಗಳೂರು,ಜನವರಿ. 31: ನಗರದಲ್ಲಿ ಇಂಟರ್‌ನೆಟ್ ವೆಬ್ ಸೈಟ್ ಮೂಲಕ ವೇಶ್ಯಾವಾಟಿಕೆಗಾಗಿ ಯುವತಿಯರನ್ನು ಒದಗಿಸುತ್ತಿದ್ದ ಇಬ್ಬರು ಪಿಂಪ್‌ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಗರದ ಕೆ.ಎಸ್ ರಾವ್ ರಸ್ತೆಯ ಲಾಡ್ಜ್ ವೊಂದನ್ನು ಕೇಂದ್ರಿಕರಿಸಿ ಇಂಟರ್ ನೆಟ್ ಮೂಲಕ ವೇಶ್ಯಾವಾಟಿಕೆಗಾಗಿ ಗ್ರಾಹಕರಿಗೆ ಯುವತಿಯರನ್ನು ಒದಗಿಸಿ ವ್ಯವಹಾರ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಹಳೆ ಬಸ್ ನಿಲ್ದಾಣದ ಬಳಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ತೊಕ್ಕೊಟ್ಟು ನಿವಾಸಿ ಶೇಖ್ ಮೊಹಮ್ಮದ್ ರಫೀಕ್ (40) ಹಾಗೂ ಮಡಿಕೇರಿ.ವಿರಾಜಪೇಟೆಯ ದೀಪಕ್ (43) ಎಂದು ಗುರುತಿಸಲಾಗಿದೆ.

ಆರೋಪಿಗಳು ಈ ಹೈಟೆಕ್ ವೇಶ್ಯಾವಾಟಿಕೆ ಧಂಧೆಯನ್ನು ನಡೆಸಲು ಇಂಟರ್ ನೆಟ್ ನಲ್ಲಿ http://m.locanto.in/mangalore/ Women-Seeking-Men ಎಂಬ ಹೆಸರಿನಲ್ಲಿ ವೆಬ್ ಸೈಟ್ ನಲ್ಲಿ ಇವರ ಮೊಬೈಲ್ ನಂಬ್ರಗಳನ್ನು ನಮೂದಿಸಿ ಈ ಮೊಬೈಲ್ ನಂಬ್ರಗಳಿಗೆ ಕರೆ ಮಾಡಿದ ಗ್ರಾಹಕರಿಗೆ ಯುವತಿಯರನ್ನು ವೇಶ್ಯಾವಾಟಿಕೆಗಾಗಿ ನೀಡುತ್ತಿದ್ದರು ಎನ್ನಲಾಗಿದೆ.

ಆರೋಪಿಗಳ ವಶದಿಂದ 2 ಮೊಬೈಲ್ ಫೋನ್ ಗಳನ್ನು ಹಾಗೂ ನಗದು ರೂ. 12,500/- ಮತ್ತು ಆಟೋ ರಿಕ್ಷಾವೊಂದನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 1,64,500/- ಆಗಿರುತ್ತದೆ. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಸುನೀಲ್ ವೈ ನಾಯಕ್ ಮತ್ತು ಪಿ.ಎಸ್.ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Comments are closed.