ಕರಾವಳಿ

ಜಿಲ್ಲೆಗೆ ಪ್ರದಾನಿ ಅಗಮನ ಹಿನ್ನೆಲೆ : ವಾಯುಪಡೆಯ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದ ವಿಶೇಷ ಕಾರು

Pinterest LinkedIn Tumblr

ಮಂಗಳೂರು ಅಕ್ಟೋಬರ್.27: ಪ್ರಧಾನಿ ನರೇಂದ್ರ ಮೋದಿಯವರು ಅ.29ರಂದು ಧರ್ಮಸ್ಥಳಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಪ್ರವಾಸ ಸಂದರ್ಭದಲ್ಲಿ ಬಳಸುವ ವಿಶೇಷ ಕಾರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ತಲುಪಿದೆ.

ವಾಯುಪಡೆಯ ವಿಶೇಷ ವಿಮಾನದಲ್ಲಿ ಈ ಕಾರುಗಳು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿವೆ. ದ.ಕ.ಜಿಲ್ಲಾ ಭೇಟಿ ಹಿನ್ನೆಲೆಯಲ್ಲಿ ಪ್ರದಾನಿ ಅವರ ಭದ್ರತೆಗೆ ವಿಶೇಷ ಗಮನ ಹರಿಸಲಾಗುತ್ತಿದ್ದು, ಪ್ರಧಾನಿಯು ಮಂಗಳೂರು ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಧರ್ಮಸ್ಥಳಕ್ಕೆ ತೆರಳುವರು. ಈ ಹಿನ್ನೆಲೆಯಲ್ಲಿ ವಾಯುಪಡೆಯ ಪ್ರತ್ಯೇಕ ವಿಮಾನದಲ್ಲಿ ಇಂದು ಬೆಳಿಗ್ಗೆ ಕಾರು ಮಂಗಳೂರಿಗೆ ಬಂದಿಳಿದಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿ ನಂತರ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳಲಿದ್ದಾರೆ.

ಧರ್ಮಸ್ಥಳ ಶ್ರೀ ಮಂಜುನಾಥ ದೇವಳಕ್ಕೆ ಭೇಟಿ ನೀಡುವ ಅವರು ಮಂಜುನಾಥ ಸ್ವಾಮಿ ದೇವಾಲಯಕ್ಕೆ ತೆರಳಿ ದರ್ಶನ ಪಡೆಯಲಿರುವರು. ಬಳಿಕ ಉಜಿರೆಯ ರತ್ನವರ್ಮ ಹೆಗ್ಗಡೆ ಮೈದಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸಮಾವೇಶದಲ್ಲಿ ಭಾಗವಹಿಸುವರು. ಈ ಎಲ್ಲಾ ಕಡೆ ತೆರಳಲು ಪ್ರಧಾನಿ ನರೇಂದ್ರ ಮೋದಿ ಈ ವಿಶೇಷ ಕಾರುಗಳನ್ನು ಬಳಸಲಿದ್ದಾರೆ.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಈಗಾಗಲೇ ವಿಶೇಷ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ಅವರ ಭದ್ರತೆಯ ಹೊಣೆ ಹೊತ್ತಿರುವ ಎಸ್.ಪಿ.ಜಿ ತಂಡ ಈಗಾಗಲೇ ಧರ್ಮಸ್ಥಳದಲ್ಲಿ ಬೀಡು ಬಿಟ್ಟಿದ್ದು ಭದ್ರತೆಯ ಪರಿಶೀಲನೆ ನಡೆಸಿದೆ.

ಪ್ರಧಾನ ಮಂತ್ರಿಗಳ ಭಾಷಣದ ನೇರ ಪ್ರಸಾರಕ್ಕೂ ಅಗತ್ಯವಾದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಸಾರ್ವಜಣಿಕರಿಗೆ ವಿಶೇಷ ತಪಾಸಣೆಯ ಮೂಲಕ ಮಾತ್ರವೇ ಮೈದಾನದ ಒಳಗೆ ಹೋಗಲು ಅನುಮತಿ ನೀಡಲಾಗುತ್ತದೆ. ಈ ವೇಳೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಕೊಂಡೊಯ್ಯಬೇಕಾಗಿದೆ.

Comments are closed.