ಕರಾವಳಿ

ಸ್ಪರ್ಧೆ ವೇಳೆ ಕುಸಿದು ಬಿದ್ದು ಬಾಡಿಬಿಲ್ಡರ್‌ ಮೃತ್ಯು

Pinterest LinkedIn Tumblr

ಮಂಗಳೂರು, ನವೆಂಬರ್.6: ಬಾಡಿ ಬಿಲ್ಡಿಂಗ್ ಸ್ಪರ್ಧೆ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಗರದಲ್ಲಿ ರವಿವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಫರಂಗಿಪೇಟೆ ನಿವಾಸಿ ಬಾಡಿಬಿಲ್ಡರ್‌ ವಿನಯರಾಜ್ (34) ಎಂದು ಗುರುತಿಸಲಾಗಿದೆ. ವಿನಯರಾಜ್ ಮಂಗಳೂರಿನಲ್ಲಿ ಇಲೆಕ್ಟ್ರಿಶಿಯನ್ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಬಾನುವಾರ ಮಂಗಳೂರಿನ ಡಾನ್ ಬಾಸ್ಕೊ ಹಾಲ್ ನಲ್ಲಿ ನಡೆಯುತ್ತಿದ್ದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಇವರು ಭಾಗವಹಿಸಿದ್ದರು. ಈ ವೇಳೆ ಇವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬಂದರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Comments are closed.