ಆಸ್ಪತ್ರೆಯಲ್ಲಿರುವ ಯೋಧನ ಚಿಕಿತ್ಸೆಗೆ ಸಹಾಯ, ಸಹಕಾರ ನೀಡಲು ಸರಕಾರ ಸಿದ್ಧ : ಕೆ.ಸಿ. ವೇಣುಗೋಪಾಲ್
ಮಂಗಳೂರು, ನವೆಂಬರ್.6: ಕೆಪಿಸಿಸಿ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು ಹಾವು ಕಡಿತಕ್ಕೊಳಗಾಗಿ ನಗರದ ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಭಾರತೀಯ ಸೇನಾ ಯೋಧ ಮುಡಿಪು ನಿವಾಸಿ ಸಂತೋಷ್ ಕುಮಾರ್ ಅವರನ್ನು ಸೋಮವಾರ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.
ವಿಷಪೂರಿತ ಹಾವಿನ ಕಡಿತದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಯೋಧ ಸಂತೋಷ್ ಕುಮಾರ್ ಅವರು ಚಿಂತಾಜನಕ ಸ್ಥಿತಿಯಲ್ಲಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿರುವ ಕೆಪಿಸಿಸಿ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು ಇಂದು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಭೇಟಿ ನೀಡಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯೋಧ ಸಂತೋಷ್ ಕುಮಾರ್ ಅವರ ಆರೋಗ್ಯ ವಿಚಾರಿಸಿದರು.
ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ವೇಣುಗೋಪಾಲ್ ಅವರು ಯೋಧ ಸಂತೋಷ್ ಕುಮಾರ್ ಗೆ ಚಿಕಿತ್ಸೆಗೆ ಸಹಾಯ, ಸಹಕಾರ ನೀಡಲು ಕಾಂಗ್ರೆಸ್ ಸರಕಾರ ಸಿದ್ಧವಿದೆ ಎಂದು ಹೇಳಿದರು.ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ ಸೋಜ, ಮೇಯರ್ ಕವಿತಾ ಸನೀಲ್ ಮತ್ತಿತತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಯೋಧ ಸಂತೋಷ್ ಕುಮಾರ್ ಕೆಲವು ದಿನಗಳ ಹಿಂದೆ ರಜೆಯಲ್ಲಿ ಊರಿಗೆ ಮರಳಿದ್ದರು. ಮುಡಿಪುನಲ್ಲಿರುವ ಮನೆಯ ಬಳಿ ಅವರಿಗೆ ವಿಷಪೂರಿತ ಹಾವು ಕಚ್ಚಿದ ಪರಿಣಾಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಂತೋಷ್ ಕುಮಾರ್ ಭಾರತೀಯ ಸೇನೆಯ ಯೋಧರಾಗಿದ್ದು, ಕಳೆದ ವರ್ಷ ಕಾಶ್ಮೀರದಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಸರ್ಜಿಕಲ್ ಸ್ಟ್ರೈಕ್ನಲ್ಲಿ ಪಾಲ್ಗೊಂಡಿದ್ದರು. ಕೌಟುಂಬಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಮುಡಿಪು ಕೊಡಕಲ್ಲಿಗೆ ಆಗಮಿಸಿದ್ದರು.
Comments are closed.