ಕರಾವಳಿ

ಸುರತ್ಕಲ್ : ನಾಲ್ಕು ಮಂದಿ ದುಷ್ಕರ್ಮಿಗಳ ತಂಡದಿಂದ ಯುವಕನ ಕಡಿದು ಕೊಲೆ

Pinterest LinkedIn Tumblr

ಮಂಗಳೂರು/ ಸುರತ್ಕಲ್ ಜನವರಿ, 03: ದುಷ್ಕರ್ಮಿಗಳ ತಂಡವೊಂದು ಯುವಕನೊಬ್ಬನನ್ನು ಹಾಡುಹಗಲೇ ಮಾರಾಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿರುವ ಘಟನೆ ಸುರತ್ಕಲ್ ಸಮೀಪದ ಕೃಷ್ಣಪುರ – ಕಾಟಿಪಳ್ಳ ಎಂಬಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಮೃತಪಟ್ಟ ಯುವಕನನ್ನು ಕಾಟಿಪಳ್ಳದ ಕೈಕಂಬ ನಿವಾಸಿ ದೀಪಕ್ ಯಾನೆ ದೀಪು ಸೂರಿಂಜೆ (32) ಎಂದು ಗುರುತಿಸಲಾಗಿದೆ. ಈತ ಬಜರಂಗದಳದ ಸಕ್ರೀಯ ಕಾರ್ಯಕರ್ತ ಎನ್ನಲಾಗಿದೆ.  ದೀಪು ಮೊಬೈಲ್ ಸಿಮ್ ಕಾರ್ಡ್‌ಗಳ ವಿತರಕ ಸಂಸ್ಥೆಯೊಂದರಲ್ಲಿ ಪ್ರತಿನಿಧಿಯಾಗಿ ಕಾರ್ಯನಿರ್ವಾಹಿಸುತ್ತಿರುವುದಾಗಿ ತಿಳಿದು ಬಂದಿದೆ. ಇಂದು ಮಧ್ಯಾಹ್ನವೂ ಕೂಡ ದೀಪಕ್ ಕಾಟಿಪಳ್ಳದ ಮೊಬೈಲ್ ಅಂಗಡಿಗಳಿಗೆ ಹೋಗಿದ್ದರು ಎನ್ನಲಾಗಿದೆ.

ಎಂದಿನಂತೆ ಇಂದು ಕೂಡ ಕಾರ್ಯ ನಿಮಿತ ಈತ ತನ್ನ ಬೈಕ್‌ನಲ್ಲಿ ತೆರಳುತ್ತಿದ್ದಾಗ ಕಾಟಿಪಳ್ಳ ಸಮೀಪ ಕಾರಿನಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ಏಕಾಏಕಿ ಈತನ ಮೇಲೆ ದಾಳಿ ಮಾಡಿ ಹರಿತವಾದ ಅಯುಧಗಳಿಂದ ಕಡಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆಯಲ್ಲಿ ತೊಡಗಿದ್ದಾರೆ.

News Updated…

ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಇಂದು ಮಧ್ಯಾಹ್ನ ಸುಮಾರು 1.30ಕ್ಕೆ ಕೃಷ್ಣಾಪುರದ ಗಣೇಶ್ ಪುರ ನಿವಾಸಿ ದೀಪಕ್ ರಾವ್ (32) ಕೊಲೆ ಮಾಡಲಾಗಿದೆ. ಡೊಕೊಮೊ ಮೊಬೈಲ್ ಕಂಪನಿಯಲ್ಲಿ ಕರೆನ್ಸಿ ಡಿಸ್ಟ್ರಿಬ್ಯೂಟರ್ ಆಗಿದ್ದ ದೀಪಕ್ ಸ್ಥಳೀಯ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ. ಕಾಟಿಪಳ್ಳದಲ್ಲಿ ಬೈಕಿನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ಕಾರಿನಲ್ಲಿ ಬಂದ ನಾಲ್ವರ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಯಿಂದ ತೀವ್ರ ಗಾಯಗೊಂಡ ದೀಪಕ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸುರತ್ಕಲ್ ಮತ್ತು ಮಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದ್ದಾರೆ.

ಮಜೀದ್ ಎಂಬವರ ಮೊಬೈಲ್ ಶಾಪ್ ನಲ್ಲಿ ದೀಪಕ್ ಕೆಲಸಕ್ಕಿದ್ದರು ಎಂದು ಹೇಳಲಾಗಿದೆ. ಕಲೆಕ್ಷನ್ ಹಣವನ್ನು ಅಂಗಡಿಗೆ ಕೊಟ್ಟು ಮನೆಗೆ ವಾಪಾಸಾಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬೈಕನ್ನು ಅಡ್ಡಗಟ್ಟಿ ಕಾಟಿಪಳ್ಳದ ಮೂಡಾಯಿಕೋಡಿ ಎಂಬಲ್ಲಿ ಹತ್ಯೆ ಮಾಡಿದ್ದಾರೆ. ಸುರತ್ಕಲ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಗಳ ಪತ್ತೆಗೆ ವ್ಯಾಪಕ ಬಲೆ ಬೀಸಿದ್ದಾರೆ

Comments are closed.