ಕರಾವಳಿ

ಉಡುಪಿಯ ಮೋದಿ ಕಾರ್ಯಕ್ರಮಕ್ಕೆ ಪೆಂಡಾಲ್ ಸಾಗಿಸುತ್ತಿದ್ದ ಟೆಂಪೋ ಅಪಘಾತ: ಮೂವರ ದುರ್ಮರಣ

Pinterest LinkedIn Tumblr

ಉಡುಪಿ: ಉಡುಪಿಯಲ್ಲಿ ಮೇ.1ರಂದು ನಡೆಯಲಿರುವ ಪ್ರದಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಪೆಂಡಲ್ ಸಾಗಿಸುತ್ತಿದ್ದ ಈಚರ್ ಟೆಂಪೋ ಅಫಘಾತಕ್ಕೀಡಾಗಿ ಮೂವರು ಕಾರ್ಮೀಕರು ಮೃತಪಟ್ಟ ಘಟನೆ ಭಾನುವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಪೆರ್ಡೂರು ಎಂಬಲ್ಲಿ ನಡೆದಿದೆ. ಮೃತರನ್ನು ಅಸ್ಸಾಂ ಮೂಲದ ಕಾರ್ಮೀಕರೆಂದು ಗುರುತಿಸಲಾಗಿದೆ. ಮೃತರು ಮಾಹಿತಿ ಇನ್ನೂ ಸಿಕ್ಕಿಲ್ಲ.

ಉಡುಪಿ ಎಂ ಜಿ ಎಂ ಕಾಲೇಜು ಮೈದಾನದಲ್ಲಿ ನಡೆಯುವ ಪ್ರದಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಚಿತ್ರದುರ್ಗಾದಿಂದ ಪೆಂಡಾಲ್ ಸಾಗಾಟ ಮಾಡುತ್ತಿದ್ದ ಟೆಂಪೋ ಚಾಲಕನ ನಿರ್ಲಕ್ಷದಿಂದ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದು ಈ ಅಫಘಾತ ಸಂಭವಿಸಿದೆ.

ಅಪಘಾತದ ಸಂದರ್ಭ ಟೆಂಪೋದಲ್ಲಿ 12 ಕಾರ್ಮೀಕರಲ್ಲಿ ಓರ್ವ ಕಾರ್ಮೀಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮದ್ಯೆ ಮೃತಪಟ್ಟಿದ್ದಾರೆ. ಇತರೆ ಕಾರ್ಮಿಕರಿಗೆ  ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಹಿರಿಯಡ್ಕ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.

Comments are closed.