ಕರಾವಳಿ

ದ್ವಿತೀಯ ಪಿಯು ಫಲಿತಾಂಶ :ಮೂರು ಜಿಲ್ಲೆಗಳ ಉತ್ತಮ ಸಾಧನೆಗೆ ಕಾರ್ಣಿಕ್ ಅಭಿನಂದನೆ

Pinterest LinkedIn Tumblr

ಮಂಗಳೂರು : 2017-18ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟವಾಗಿದ್ದು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದ ದಕ್ಷಿಣ ಕನ್ನಡ ಜಿಲ್ಲೆ, ದ್ವಿತೀಯ ಸ್ಥಾನವನ್ನು ಪಡೆದ ಉಡುಪಿ ಜಿಲ್ಲೆ ಹಾಗೂ ಮೂರನೇ ಸ್ಥಾನವನ್ನು ಪಡೆದ ಕೊಡಗು ಜಿಲ್ಲೆಗಳ ಎಲ್ಲಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ, ಉಪನ್ಯಾಸಕರಿಗೆ ಹಾಗೂ ಕಠಿಣ ಪರಿಶ್ರಮದ ಮೂಲಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯಕ್ಕೆ ಮಾದರಿಯಾಗಬಲ್ಲ ಶೈಕ್ಷಣಿಕ ಪರಂಪರೆಯನ್ನು ಹೊಂದಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ಒಳಗೊಂಡ ನೈರುತ್ಯ ಶಿಕ್ಷಕರ ಕ್ಷೇತ್ರದ ಜಿಲ್ಲೆಗಳ ಉಪನ್ಯಾಸಕರು ಹಾಗೂ ಪ್ರಾಂಶುಪಾಲರು, ಪಠ್ಯಕ್ರಮದ ಚೌಕಟ್ಟಿನಲ್ಲಿ ಯಾವುದೇ ಗೊಂದಲಗಳಿಗೆ ಅಸ್ಪದ ಕೊಡದೆ ಶೈಕ್ಷಣಿಕ ಗುಣಮಟ್ಟವನ್ನು ಕಾಯ್ದುಕೊಂಡು ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ನೀಡದ ಕೊಡುಗೆಯನ್ನು ಸ್ಮರಿಸುತ್ತಾ ಅದ್ಬುತ ಸಾಧನೆಯನ್ನು ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಯಶಸ್ಸು ಹಾಗೂ ಉಜ್ವಲ ಭವಿಷ್ಯ ದೊರೆಯಲಿ ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ತಮ್ಮ ಪತ್ರಿಕಾ ಹೇಳಿಕೆ ಮೂಲಕ ಹಾರೈಸಿದ್ದಾರೆ.

Comments are closed.