ಕರಾವಳಿ

ಮಂಗಳೂರು ದಕ್ಷಿಣ ಕ್ಷೇತ್ರ : ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Pinterest LinkedIn Tumblr

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರವಾಗಿ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್‌ನ ಮಾಜಿ ಮುಖಂಡ ಶಶಿರಾಜ್ ಶೆಟ್ಟಿ ಕೊಳಂಬೆ ನೇತೃತ್ವದಲ್ಲಿ ಬಿಜೆಪಿ ಸೇರಿದರು.

ಮಂಗಳೂರು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಈ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಪಕ್ಷದ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಸೇರಿದಂತೆ ಪಕ್ಷದ ವಿವಿಧ ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು.

ಪಕ್ಷಕ್ಕೆ ಸೇರ್ಪಡೆಗೊಂಡ ನಾಯಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ, ವಾರ್ಡ್ ಗಳಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ಇದೇ ವೇಳೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತಪ್ರಚಾರ ಬಿರುಸಿನಿಂದ ಸಾಗಿದ್ದು, ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

Comments are closed.