ಉಡುಪಿ: ಕರ್ನಾಟಕ ಕರಾವಳಿ ಮೀನುಗಾರಿಕೆ (ನಿಯಂತ್ರಣ) ಕಾಯ್ದೆ,1986 ಅನ್ವಯ ,ಉಡುಪಿ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು /ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕಾ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ,ಒಟ್ಟು 61 ದಿನಗಳ ನಿಷೇದ ಆದೇಶ ಹೊರಡಿಸಿರುತ್ತಾರೆ.
ಅಲ್ಲದೇ ಕೇಂದ್ರ ಕೃಷಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವಾಲಯವು ನಿಷೇದವನ್ನು ಜಾರಿಗೊಳಿಸಿರುತ್ತದೆ. ಈ ಮೀನುಗಾರಿಕೆ ನಿಷೇಧದ ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು/ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-೧೯೮೬ ರಲ್ಲಿ ವಿಧಿಸಲಾಗುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ. ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸರ್ಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಉಪನಿರ್ದೇಶಕರು,ಉಡುಪಿ ಇವರ ಪ್ರಕಟಣೆ ತಿಳಿಸಿದೆ.
Comments are closed.