ಕರಾವಳಿ

ಎಮ್‌ಎಲ್‍‌ಸಿ ಚುನಾವಣೆ ಹಿನ್ನೆಲೆ : ಮತದಾರರ ಅನುಕೂಲಕ್ಕಾಗಿ ಜೂನ್ 8ರಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ

Pinterest LinkedIn Tumblr

ಮಂಗಳೂರು : ಜೂನ್ 8 ಶುಕ್ರವಾರದಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಮತದಾನ ಮಾಡಲು ಅನುಕೂಲವಾಗುವಂತೆ ಸರ್ಕಾರ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದೆ ಎಂದು ನೈಋತ್ಯ ಶಿಕ್ಷಕ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.

ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ (ರಾಜ್ಯ ಶಿಷ್ಠಾಚಾರ) ಇಲಾಖೆ ದಿನಾಂಕ ೫ನೇ ಜೂನ್ 2018ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್ ಗಳು, ರಾಜ್ಯ ಸರ್ಕಾರದ ಕಾರ್ಖಾನೆಗಳು, ಕೇಂದ್ರ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗು ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಪದವೀಧರ ಹಾಗೂ ಶಿಕ್ಷಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ 8ನೇ ಜೂನ್ 2018 ರ ಶುಕ್ರವಾರದಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಾದ್ಯಂತ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಹಾಗೂ ಚೆನ್ನಗಿರಿ ತಾಲೂಕು ವ್ಯಾಪ್ತಿಯಲ್ಲಿ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಅರ್ಹ ಮತದಾರರು ಇದರ ಪ್ರಯೋಜನ ಪಡೆಯುವಂತೆ ಕೋರಲಾಗಿದೆ.

Comments are closed.