ಕರಾವಳಿ

ಬಂಟ್ವಾಳ ಡ್ಯಾಂ ಸಮೀಪ ನಾಪತ್ತೆಯಾಗಿದ್ದ ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆ

Pinterest LinkedIn Tumblr

ಬಂಟ್ವಾಳ, ಜೂನ್. 11: ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಎಎಂಆರ್ ಡ್ಯಾಂ ಸಮೀಪದ ಪಡಿಮುಗೇರು ಎಂಬಲ್ಲಿ ರವಿವಾರ ಸಂಜೆ ಕಳೆದ ಎಂಟು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜಿರ ಮನೆ ನಿವಾಸಿ ತಿಮ್ಮಪ್ಪ ಗೌಡ ಎಂಬವರ ಪುತ್ರ ರಮೇಶ ಗೌಡ (45) ಎಂದು ಗುರುತಿಸಲಾಗಿದೆ. ರಮೇಶ ಗೌಡ ಕಳೆದ ಎಂಟು ದಿನಗಳಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ರಮೇಶ ಗೌಡ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ

ಘಟನಾ ಸ್ಥಳಕ್ಕೆ ಬಿಜೆಪಿ ಮುಖಂಡ ಜಿ. ಆನಂದ, ತಾಲೂಕು ಕಚೇರಿ ಸಿಬ್ಬಂದಿ ಸದಾಶಿವ ಕೈಕಂಬ, ಸುಂದರ್, ಚಂದ್ರಶೇಖರ್, ಶೀತಲ್ ಭೇಟಿ ನೀಡಿದ್ದು ಮಹಜರು ನಡೆಸಿದ್ದಾರೆ.

ರಮೇಶ್ ಅವರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರ ಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿರುವ ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Comments are closed.